Bangalore University: Sasikumar V. He was awarded the degree of Ph.D

ಬೆಂಗಳೂರು. ಅ.09: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದ ಪಿಎಚ್.ಡಿ ಪದವಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ನಿವಾಸಿ ಲೇಟ್ ವೆಂಕಟಸ್ವಾಮಪ್ಪ ಮತ್ತು ಶ್ರೀಮತಿ ರತ್ನಮ್ಮ ದಂಪತಿಯ ಪುತ್ರ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಬೆಂವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಗೋವಿಂದಪ್ಪ ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಹೆಳವರ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಧ್ಯಯನ (ವಿಶೇಷವಾಗಿ ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ) : ಸ್ವಾತಂತ್ಯೋತ್ತರ ಕಾಲಘಟ್ಟ ವಿಶ್ಲೇಷಣೆ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಗೌರವಾನ್ವಿತ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಡಿಆರ್ ಡಿಎಲ್ ಮಾಜಿ ನಿರ್ದೇಶಕ ಡಾ. ಪ್ರಹ್ಲಾದ ರಾಮರಾವ್, ಕುಲಪತಿ ಡಾ. ಜಯಕರ ಎಸ್.ಎಂ. ಅವರು ಪಿಎಚ್.ಡಿ ಪದವಿ ಪ್ರಧಾನ ಮಾಡಿದರು. ಇದೇ ವೇಳೆ ಬೆಂವಿವಿಯ ನಾನಾ ವಿಭಾಗಗಳ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.