Connect 2025 conference organized by Tourism Department in Gadag on October 31
ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯು ಕರ್ನಾಟಕ ಟೂರಿಸಂ ಸೊಸೈಟಿ ಇವರ ಸಹಯೋಗದೊಂದಿಗೆ ಅಕ್ಟೋಬರ್ 31 ರಂದು ಗದಗ ನಗರದ ಮಹಾತ್ಮ ಗಾಂಧಿ ಆರ್‌ಡಿಪಿಆರ್ ವಿಶ್ವವಿದ್ಯಾಲಯದಲ್ಲಿ CONNECT-2025 ರ ಸಭೆಯನ್ನು ಆಯೋಜಿಸಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಪ್ರವಾಸೋದ್ಯಮ ಭಾಗೀದಾರರು ಭಾಗವಹಿಸಲು ಸೂಚಿಸಿದೆ.
ಸಭೆಯ ಅಧ್ಯಕ್ಷತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ್ ಅವರು ವಹಿಸುವರು.
ಗದಗದಲ್ಲಿ ಆಯೋಜಿಸುತ್ತಿರುವ CONNECT ಸಮಾವೇಶದಲ್ಲಿ ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರವಾಸೋದ್ಯಮ ಭಾಗಿದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿ, ಭಾಗವಹಿಸುವವರ ಪಟ್ಟಿಯನ್ನು ಸಿದ್ದಪಡಿಸಿ ಅಕ್ಟೋಬರ್ 29 ರೊಳಗೆ ಕೇಂದ್ರ ಕಛೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಸಮಾವೇಶದಲ್ಲಿ ಸಂಬAಧಪಟ್ಟ ಜಿಲ್ಲೆಗಳ ಜಂಟಿ, ಉಪ, ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಲೋಚಕರೊಂದಿಗೆ ಈ ಸಭೆಯಲ್ಲಿ ಭಾಗವಹಿಸುವಂತೆ ಆಯುಕ್ತರು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ರವರು ಸೂಚಿಸಿರುತ್ತಾರೆ.
ಆದ್ದರಿಂದ ಸಮಾವೇಶದಲ್ಲಿ ಕೊಪ್ಪಳ ಜಿಲ್ಲೆಯಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಪ್ರವಾಸೋದ್ಯಮ ಭಾಗೀದಾರರು ಪಾಲ್ಗೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ, ದೂರವಾಣಿ ಸಂಖ್ಯೆ: 08539-225566 ಇವರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
