Health Department: Applications invited for the recruitment of Yoga Trainers
ಆರೋಗ್ಯ ಇಲಾಖೆ: ಯೋಗ ತರಬೇತುದಾರರ ಭರ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ ನವೆಂಬರ್ 04, (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎನ್.ಯು.ಎಚ್.ಎಂ ಹಾಗೂ ಪಿಎಂ ಅಭಿಮ್ ಕಾರ್ಯಕ್ರಮದಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 3, ನಮ್ಮ ಕ್ಲಿನಿಕ್‌ಗಳೀಗೆ 14 ಸೇರಿದಂತೆ ಒಟ್ಟು ಖಾಲಿ ಇರುವ 17 ಯೋಗ ತರಬೇತುದಾರರನ್ನು ವಾಕ್ ಇನ್ ಇಂಟರ್‌ವ್ಯೂವ್ ಮುಖಾಂತರ ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ. ಒಂದು ವೇಳೆ ಖಾಲಿ ಹುದ್ದೆಗಳು ಭರ್ತಿಯಾಗದೇ ಇದ್ದಲ್ಲಿ ಭರ್ತಿಯಾಗುವವರೆಗೂ ಪ್ರತಿ ದಿನ 2026 ರ ಮಾರ್ಚ್ 31 ರವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಸಲಾಗುವುದು. ಆಸಕ್ತರು ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿ ಖುದ್ದಾಗಿ ಅರ್ಜಿ ನಮೂನೆ ಪಡೆದು ತಮ್ಮ ಸೂಕ್ತ ದಾಖಲಾತಿಗಳ ಸಹಿತ ಅರ್ಜಿ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಮೇಲಿನ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
