Breaking News

ವಂದೇ ಮಾತರಂ ಗೀತೆಗೆ 150 ವರ್ಷ: ಇಂದು ಜಿಲ್ಲಾಡಳಿತದಿಂದ ಸಾಮೂಹಿಕ ಗಾಯನ ಕಾರ್ಯಕ್ರಮ

150 years of Vande Mataram: District administration organizes mass singing program today

ವಂದೇ ಮಾತರಂ ಗೀತೆಗೆ 150 ವರ್ಷ: ಇಂದು ಜಿಲ್ಲಾಡಳಿತದಿಂದ ಸಾಮೂಹಿಕ ಗಾಯನ ಕಾರ್ಯಕ್ರಮ

ಜಾಹೀರಾತು

ಕೊಪ್ಪಳ ನವೆಂಬರ್ 06, (ಕರ್ನಾಟಕ ವಾರ್ತೆ): ವಂದೇ ಮಾತರಂ ಗೀತೆಗೆ ನವೆಂಬರ್ 7 ರಂದು 150 ವರ್ಷಗಳು ತುಂಬಿದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಮ್ ಹಾಲ್‌ನಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಮ್ಮ ಸಿಬ್ಬಂದಿವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.
ವಂದೇ ಮಾತರಂ ಗೀತೆಯನ್ನು ಬಂಕಿಮ್ ಚಂದ್ರ ಚಟರ್ಜಿ ರವರು 1875 ನವೆಂಬರ್ 7ರ ಅಕ್ಷಯ ನವಮಿಯ ಶುಭ ಸಂದರ್ಭದಲ್ಲಿ ಈ ಗೀತೆಯನ್ನು ರಚಿಸಿದ್ದು, ವಂದೇ ಮಾತರಂ ಗೀತೆಯು ಮೊದಲು ಸಾಹಿತ್ಯಿಕ ಪತ್ರಿಕೆ ಬಂಗದರ್ಶನದಲ್ಲಿ ಅವರ ಕಾದಂಬರಿ ಆನಂದಮಠದ ಭಾಗವಾಗಿ ಧಾರಾವಾಹಿಯಾಗಿ ಮತ್ತು 1887ರಲ್ಲಿ ಸ್ವತಂತ್ರ ಪುಸ್ತಕವಾಗಿ ಮುದ್ರಣಗೊಂಡಿತು. ಈ ಅವಧಿಯಲ್ಲಿ ಭಾರತವು ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬದಲಾವಣೆಗಳಿಗೆ ಒಳಗಾಗುತಿತ್ತು, ಮತ್ತು ವಸಾಹತುಶಾಹಿ ಆಳ್ವಿಕೆಗೆ ರಾಷ್ಟಿçÃಯ ಗುರುತಿನ ಪ್ರಜ್ಞೆ ಮತ್ತು ಪ್ರತಿರೋಧ ಬೆಳೆಯುತ್ತಿತ್ತು ಈ ಸಂದAರ್ಭದಲ್ಲಿ ಶಕ್ತಿ ಸಮೃದ್ಧಿ ಮತ್ತು ದೈವತ್ವದ ಸಾಕಾರ ರೂಪವಾಗಿ ಮಾತೃಭೂಮಿಯನ್ನು ಸ್ವಾಗತಿಸುವ ಈ ಹಾಡು ಭಾರತದ ಏಕತೆ ಮತ್ತು ಸ್ವಾಭಿಮಾನದ ಜಾಗೃತಿ ಮನೊಭಾವಕ್ಕೆ ಕಾವ್ಯತ್ಮಕ ಅಭಿವ್ಯಕ್ತಿಯ ಪ್ರೇರಣೆಯನ್ನು ನೀಡಿತು.
ಕೇಂದ್ರ ಸಂಸ್ಕೃತಿ ಸಚಿವಾಲಯವು ಗೀತೆಯ ಐತಿಹಾಸಿಕ ಮಹತ್ವ ಮತ್ತು ರಾಷ್ಟಿçÃಯ ಮಹತ್ವವನ್ನು ಗುರುತಿಸಿ ಬಂಕಿಮ್ ಚಂದ್ರ ಚಟರ್ಜಿ ಅವರ ಕೊಡುಗೆಯನ್ನು ಎತ್ತಿ ತೋರಿಸಲು ಹಾಗೂ ಗೀತೆ ಒಳಗೊಂಡಿರುವ ಏಕತೆ, ತ್ಯಾಗ ಮತ್ತು ಮಾತೃಭೂಮಿಯ ಮೇಲಿನ ಪ್ರೀತಿಯ ಮೌಲ್ಯಗಳನ್ನು ಪ್ರತಿಯೊಬ್ಬ ನಾಗರಿಕರಲ್ಲಿ ಮೂಡಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಗೀತೆಯ 150ನೇ ವರ್ಷದ ಸ್ಮರಣಾರ್ಥವಾಗಿ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.