ಭತ್ತಕ್ಕೆ ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ನೀರು ಬಿಡುಗಡೆಗಾಗಿ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಪ್ರತಿಭಟನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
All India Kisan Sabha protests demanding support price for paddy. Crop loss compensation and release of water for summer crops

ಭತ್ತಕ್ಕೆ ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ನೀರು ಬಿಡುಗಡೆಗಾಗಿ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಪ್ರತಿಭಟನೆ

ಜಾಹೀರಾತು

ಗಂಗಾವತಿ: ರೈತರು ಬೆಳೆದ ಬತ್ತದ ಬೆಳೆಗೆ ಬೆಂಬಲ ಬೆಲೆ ಅಕಾಲಿಕ ಮಳೆಯಿಂದ ಬೆಳೆ ನಷ್ಟ ಉಂಟಾಗಿದ್ದು ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ಸಮರ್ಪಕವಾಗಿ ನಿರ್ಹರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲೂಕ ಸಮಿತಿಯಲ್ಲಿ ನೇತೃತ್ವದಲ್ಲಿ ಮಂಗಳವಾರದಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಎ.ಹುಲುಗಪ್ಪ ಮಾತನಾಡಿ ಸಾಲ ಮಾಡಿ ಭತ್ತ ಬೆಳೆದ ರೈತರಿಗೆ ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಷ್ಟ ಹಾಗಿದ್ದು ಈ ಹಿನ್ನೆಲೆಯಲ್ಲಿ ಸರಕಾರ ತಕ್ಷಣವೇ ಪರಿಹಾರ ಕಲ್ಪಿಸಬೇಕು. ಜೊತೆಗೆ ಸರ್ಕಾರದಿಂದ ನಿಗದಿಪಡಿಸಲಾದ ಭತ್ತಕ್ಕೆ 3500 ಬೆಂಬಲ ಬೆಲೆ ನಿಗದಿಪಡಿಸಬೇಕು ಜೊತೆಗೆ ಭತ್ತದ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ ಮಾತನಾಡಿ ರೈತರು ಬೆಳೆದ ಬೆಳೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬೆಳೆ ವಿಮೆ ಹಣವನ್ನು ಸರ್ಕಾರ ಬರಿಸಬೇಕು ಇವುಗಳ ಜೊತೆಗೆ ಬೇಸಿಗೆ ಬೆಳೆಗೆ ನೀರು ಹರಿಸುವುದರ ಮೂಲಕ ರೈತರ ಬದುಕಿಗೆ ಆಸರೆ ಆಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಮಂಜುನಾಥ. ಕಾರ್ಯದರ್ಶಿ ಶೇಕಮ್ಮ. ಹಂಪಸದುರ್ಗ.ನೀಲಪ್ಪ ತಾಹಿರಾಬೇಗಂ.ಸುಬ್ಬರಾವ್. ಹನುಮೇಶ. ಗಂಗಮ್ಮ. ಶ್ರೀನಿವಾಸ ಕೇಶಪ್ಪ.ಸಣ್ಣಪ್ಪ ಮತ್ತಿತರರು ಸಂಘಟನೆಯ ಸದಸ್ಯರು ಹಾಗೂ ರೈತರು ಪಾಲ್ಗೊಂಡಿದ್ದರು.

Total Views: 0
Share This Article