ನ.14 ರಂದು ಪೋಷಕರ ಶಿಕ್ಷಕರ ಮಹಾಸಭೆ: ಅಗತ್ಯ ಕ್ರಮ ವಹಿಸುವಂತೆ ಸೂಚನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

ನ.14 ರಂದು ಪೋಷಕರ ಶಿಕ್ಷಕರ ಮಹಾಸಭೆ: ಅಗತ್ಯ ಕ್ರಮ ವಹಿಸುವಂತೆ ಸೂಚನೆ

ಜಾಹೀರಾತು
ಕೊಪ್ಪಳ ನವೆಂಬರ್ 11, (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರಕಾರದಿಂದ ಅನುಷ್ಠಾನಿಸಲಾಗಿರುವ ಉಪಕ್ರಮಗಳು ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪೋಷಕ-ಶಿಕ್ಷಕರ ಸಭೆ ನಡೆಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.
ಅದರನ್ವಯ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಏಕಕಾಲಕ್ಕೆ ಕೊಪ್ಪಳ ಜಿಲ್ಲೆಯ ಎಲ್ಲಾ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಆಯೋಜಿಸುವುದು ಕಡ್ಡಾಯವಾಗಿರುತ್ತದೆ. ಸುತ್ತೋಲೆಯಲ್ಲಿ ತಿಳಿಸಿರುವಂತೆ ಅವಶ್ಯಕ ಪೂರ್ವ ಸಿದ್ದತೆಗಳೊಂದಿಗೆ ಹಮ್ಮಿಕೊಳ್ಳಬೇಕಾದ ಎಲ್ಲಾ ಚಟುವಟಿಕೆಗಳನ್ನು ಸಂಬAಧಿಸಿದ ಶಾಲಾ ಮುಖ್ಯಸ್ಥರು ಕ್ರಮ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article