ಶಾಸಕರ ಖರೀದಿ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು
Allegations of MLAs being bribed: Complaint filed against fraudster Narayanaswamy

ಬೆಂಗಳೂರು,ನ.25: ಕಾಂಗ್ರೆಸ್ ಶಾಸಕರ ಖರೀದಿ ನಡೆಯುತ್ತಿದೆ ಎಂದು ಆಧಾರ ರಹಿತ ಹೇಳಿಕೆ ನೀಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸೋಮವಾರ(ನ.24) ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಶಾಸಕರಿಗೆ ತಲಾ 50 ಕೋಟಿ ರೂ. ನಗದು, ಒಂದು ಫ್ಲಾಟ್ ಹಾಗೂ ಫಾರ್ಚೂನರ್ ಕಾರು ಕೊಡಲಾಗುತ್ತಿದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ ಮಾತ್ರವಲ್ಲದೆ, ಆಧಾರರಹಿತವಾಗಿದೆ ಎಂದು ಜುನೈದ್ ಪಿ.ಕೆ. ಹೇಳಿದ್ದಾರೆ.
ಒಂದು ವೇಳೆ ಈ ರೀತಿಯ ಘಟನೆ ನಡೆದರೆ ಇದು ಭ್ರಷ್ಟಾಚಾರದ ಒಂದು ಭಾಗವಾಗಿದೆ. ಈ ಬಗ್ಗೆ ಪ್ರಚಾರ ಗಿಟ್ಟಿಸಲು ಕಾಂಗ್ರೆಸ್ ಶಾಸಕರ ಕುರಿತು ಇಲ್ಲಸಲ್ಲದ ಆರೋಪ ಮಾಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಅವರು ಒತ್ತಾಯಿಸಿದ್ದಾರೆ.
Kalyanasiri Kannada News Live 24×7 | News Karnataka
