ನ. 26 ರಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Energy Minister K.J. George's visit to Koppal district on Nov. 26
ಕೊಪ್ಪಳ ನವೆಂಬರ್ 25 (ಕರ್ನಾಟಕ ವಾರ್ತೆ): ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ನವೆಂಬರ್ 26 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ವಿಜಯನಗರ ಜಿಲ್ಲೆಯ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್ ನಿಂದ ನಿರ್ಗಮಿಸಿ, ಹೆಲಿಕ್ಯಾಪ್ಟರ್ ಮೂಲಕ ಬೆಳಿಗ್ಗೆ 10.15ಕ್ಕೆ ಬಲ್ಡೋಟ ಕೊಪ್ಪಳ ಏರೋಡ್ರೋಮ್ ಏರ್ಪೋರ್ಟ್ (ಬಲ್ಡೋಟ ಏರೋಡ್ರೋಮ್)ಗೆ ಆಗಮಿಸಿ ಅಲ್ಲಿಂದ ಬೆಳಿಗ್ಗೆ 10.30ಕ್ಕೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11.45 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂಧನ ಇಲಾಖೆಯ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿ ಕೈಗೊಳ್ಳುವರು. ಮಧ್ಯಾಹ್ನ 1.45 ರಿಂದ 2.15 ರವರೆಗೆ ಕಾರ್ಯಕ್ರಮ ಕಾಯ್ದಿರಿಸಲಾಗಿದೆ.
ಸಚಿವರು ಅಂದು ಮಧ್ಯಾಹ್ನ 2.30 ಗಂಟೆಗೆ ಬಲ್ಡೋಟ ಕೊಪ್ಪಳ ಏರೋಡ್ರೋಮ್ ಏರ್ಪೋರ್ಟ್ ದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kalyanasiri Kannada News Live 24×7 | News Karnataka