ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ: ಮರುಪರೀಕ್ಷೆ: ಸೂಕ್ತ ತನಿಖೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ
The Bangalore City Co-operative Bank Limited Recruitment: Re-examination: Rashtriya Ambedkar Sena demands proper investigation
ಬೆಂಗಳೂರು: ನ.25: ನಗರದ ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ಇಂದು ಬೆಳಗ್ಗೆ (ಮಂಗಳವಾರ) ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಿಬ್ಬಂದಿ ನೇಮಕಾತಿಯಲ್ಲಿ ಅಧ್ಯಕ್ಷರು ಮತ್ತು ನಿರ್ದೇಶಕರ ಆಡಳಿತ ಮಂಡಳಿ ಆಯ್ಕೆ ಮಾಡಲು ಹೊರಟಿರುವ ಅಭ್ಯರ್ಥಿಗಳ ನೇಮಕಾತಿ ಪಟ್ಟಿಯನ್ನು ಕೂಡಲೇ ತಡೆಹಿಡಿದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಮರು ಪರೀಕ್ಷೆ ನಡೆಸಿ ಈ ಹಿಂದೆ ನೇಮಕಗೊಂಡ 2014, 2017ರ ನೇಮಕಾತಿಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸುವಂತೆ ಒತ್ತಾಯಿಸಿ, ರಾಷ್ಟ್ರೀಯ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ್ ಗೋಪಾಲ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳ ನಿಬಂಧಕರಾದ ಆರ್.ಸಿ.ಎಸ್.ಕುಮಾರ್ ರವರಿಗೆ ಮನವಿ ನೀಡಿದರು.
ಇದೇ ಸಂದರ್ಭದಲ್ಲಿ ಟೈಗರ್ ಎಂ ಅರುಣ್, ಎಸ್. ಕೆಂಚಯ್ಯ, ರಾಜ್ಯ ಯುವ ಘಟಕದ ಅಧ್ಯಕ್ಷರಾದ ವಿಷ್ಣು ನಾರಾಯಣ್, ಕೆಂಚಯ್ಯ ಸೇರಿದಂತೆ ಮತ್ತಿತರರು ಇದ್ದರು.
Kalyanasiri Kannada News Live 24×7 | News Karnataka
