Breaking News

ಡಿ.14 ರಂದು ರಾಜ್ಯ ಮಟ್ಟದ ಜಂಪ್ ರೋಪ್ ಕ್ರೀಡಾಕೂಟ-2025-26

ಡಿ.14 ರಂದು ರಾಜ್ಯ ಮಟ್ಟದ ಜಂಪ್ ರೋಪ್ ಕ್ರೀಡಾಕೂಟ-2025-26

State Level Jump Rope Games-2025-26 on December 14

ಕೊಪ್ಪಳ ಡಿಸೆಂಬರ್ 11, (ಕರ್ನಾಟಕ ವಾರ್ತೆ): ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಪ್ಪಳ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಹನುಮಸಾಗರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಹನುಮಸಾಗರದ ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆ(ಪ.ಪಂ.)ಯ ಆವರಣದಲ್ಲಿ 2025-26ನೇ ಸಾಲಿನ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಜಂಪ್ ರೋಪ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟವನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು. ಕ್ರೀಡಾ ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ನೆರವೇರಿಸುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕ್ರೀಡಾಜ್ಯೋತಿ ಬೆಳಗಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ. ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಹನುಮಸಾಗರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರುದ್ರಗೌಡ ಗೌಡಪ್ಪನವರ, ಹನುಮಸಾಗರ ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಬಸವರಾಜ ದ್ಯಾವಣ್ಣವರ್ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರಾದ ಭರತ್ ಎಸ್., ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಕೊಪ್ಪಳ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕ ಜಗದೀಶ್ ಜಿ.ಹೆಚ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರಿನ (ಪದವಿ ಪೂರ್ವ) ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಕೆ.ಎನ್. ಶಿವಮಾದಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಗಂಗಪ್ಪ ಸೊಗಲದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ್ ಜಾಬಗೌಡರ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಟಿ.ಆರ್ ಬಸವರಾಜ, ಕಿನ್ನಾಳ್ ಸ.ಪ.ಪೂ.ಕಾಲೇಜಿನ ಹಿರಿಯ ಪ್ರಾಚಾರ್ಯ ರಾಜಶೇಖರ ಪಾಟೀಲ್, ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ನಾಗೋಲಿ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಗೌಡ ಪಾಟೀಲ್ ಹಾಗೂ ಹನುಮಸಾಗರ ಜಂಪ್ ರೋಪ್ ಅಸೋಸಿಯೇಷನ್‌ನ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಕರಿಂ ವಂಟೆಳ್ಳಿ ಅವರು ಭಾಗವಹಿಸುವರು.
ಕೊಪ್ಪಳ ಜಿಲ್ಲೆಯ ಪ್ರಾಚಾರ್ಯರು, ಉಪನ್ಯಾಸಕರು, ದೈಹಿಕ ಶಿಕ್ಷಣ ಉಪನ್ಯಾಸಕರು, ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ದೈಹಿಕ ಶಿಕ್ಷಕರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು, ಸರ್ವ ಸದಸ್ಯರು ಗ್ರಾಮ ಪಂಚಾಯತಿ, ಹನುಮಸಾಗರ, ಜಂಪ್‌ರೋಪ್ ಸಂಘದ ಎಲ್ಲಾ ಪದಾಧಿಕಾರಿಗಳು, ಹನುಮಸಾಗರ ಸರಕಾರಿ ಪದವಿ ಪೂರ್ವ ಕಾಲೇಜಿನ, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಹನುಮಸಾಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಭೀಮಪ್ಪ ಎಚ್.ಗೊಲ್ಲರ ಹಾಗೂ ಜಿ.ಆ.ದೈ.ಹಿ.ಕ ಶಿ. ಉಪನ್ಯಾಸಕರ ಸಂಘದ ಜಿಲ್ಲಾ ಕ್ರೀಡಾ ಸಂಯೋಜಕ ತಿರುಪತಿ ನಾಯಕ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಜಗದೀಶ ಜಿ.ಎಚ್. ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.