ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Koppal District Women's Development Corporation: Application submission period extended for various projects

ಕೊಪ್ಪಳ ಡಿಸೆಂಬರ್ 12 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕೊಪ್ಪಳ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಿಗಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಮತ್ತು ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಅರ್ಜಿ ಸಲ್ಲಿಸಲು ಡಿಸೆಂಬರ್ 15ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅರ್ಜಿದಾರರ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ 15 ರ ಸಂಜೆ 5.30 ಗಂಟೆಯವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕೊಪ್ಪಳ ಅಭಿವೃದ್ಧಿ ನಿರೀಕ್ಷಕರ ಕಚೇರಿ ದೂ.ಸಂ: 9972033371 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article