ಡಿ.20 ರಂದು ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

ಡಿ.20 ರಂದು ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಜಾಹೀರಾತು
Progress review meeting of Koppal Taluk Guarantee Schemes on December20

ಕೊಪ್ಪಳ ಡಿಸೆಂಬರ್ 12, (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article