ಮಾದಕ ವ್ಯಸನ ನಿಯಂತ್ರಣ: ಸಮನ್ವಯ ಸಮಿತಿ ಸಭೆ
ವೈದ್ಯರ ಶಿಫಾರಸ್ಸು ಇಲ್ಲದೇ ನಿಷೇಧಿತ ಔಷಧಿಗಳ ಮಾರಾಟ ಮಾಡುವಂತಿಲ್ಲ: ಡಾ.ಸುರೇಶ ಬಿ.ಇಟ್ನಾಳ
ಜಾಹೀರಾತು

Drug Abuse Control: Coordination Committee Meeting

ಕೊಪ್ಪಳ ಜನವರಿ 12, (ಕರ್ನಾಟಕ ವಾರ್ತೆ): ನಿಷೇಧಿತ ಔಷಧಿಗಳನ್ನು ಯಾವುದೇ ಔಷಧ ಅಂಗಡಿಗಳಲ್ಲಿ ವೈದ್ಯರ ಶಿಫಾರಸ್ಸು ಹಾಗೂ ಅನುಮತಿ ಇಲ್ಲದೆ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲ ಔಷಧ ಅಂಗಡಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ಮಾದಕ ವ್ಯಸನ ನಿಯಂತ್ರಣ, ಸಮಸ್ಯೆಗಳ ಪರಿಹಾರ, ಮಾದಕ ವಸ್ತುಗಳ ಸಾಗಾಣಿಕೆ ಎನ್‌ಸಿಒಆರ್‌ಡಿ(ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಷೇಧಿತ ಔಷಧಿಗಳು, ನೋವು ನಿಯಂತ್ರಕ ಔಷಧಿಗಳು, ಖಿನ್ನತೆಗೆ ಸಂಬAಧಿಸಿದ ಔಷಧಿಗಳು, ನೆಗಡಿ, ಕೆಮ್ಮಿನ ಸಿರಪ್‌ಗಳನ್ನು ಯಾವುದೇ ಔಷಧ ಅಂಗಡಿಗಳು ವೈದ್ಯರ ಶಿಫಾರಸ್ಸು ಇಲ್ಲದೇ ಯಾರಿಗೂ ಮಾರಾಟ ಮಾಡುವಂತಿಲ್ಲ. ಈ ರೀತಿಯ ಔಷಧಗಳಲ್ಲಿ ಮತ್ತು ಬರಿಸುವ ಅಂಶಗಳನ್ನು ಸೇರ್ಪಡೆ ಮಾಡಲಾಗಿರುತ್ತದೆ. ನಿಗದಿತ ಪ್ರಮಾಣದ ನಂತರ ಈ ಔಷಧಿಗಳು ಮಾದಕ ವಸ್ತು ರೂಪಕ್ಕೆ ಪರಿವರ್ತನೆಗೊಂಡು ಸೇವನೆ ಮಾಡುವವರಿಗೆ ವ್ಯಸನವಾಗಿ ಬಿಡುತ್ತವೆ. ಆದ್ದರಿಂದ ನಿಷೇಧಿತ ಔಷಧಿಗಳನ್ನು ಮಾರಾಟ ಮಾಡದಂತೆ ಔಷಧಿ ಅಂಗಡಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪ್ರತಿ ಔಷಧ ಅಂಗಡಿಗಳಲ್ಲಿ ವೈದ್ಯರ ಮಾರ್ಗದರ್ಶನವಿಲ್ಲದೆ ಔಷಧ ಮಾರಾಟ ನಿಷೇಧ ಎಂಬ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ವೈದ್ಯಕೀಯ ಬಳಕೆಗೆ ಪೂರ್ವಾನುಮತಿ ಇಲ್ಲದೆ ಅಕ್ರಮವಾಗಿ ಮಾದಕ ಔಷಧಗಳನ್ನು ತಯಾರಿಸುತ್ತಿರುವ ಅಥವಾ ಮಾರಾಟ ಮಾಡುತ್ತಿರುವ ನೋಂದಾಯಿಸದ ಕಂಪನಿಗಳು ಹಾಗೂ ಔಷಧಾಲಯಗಳನ್ನು ಗುರುತಿಸಲು ಔಷಧ ನಿಯಂತ್ರಣ ಇಲಾಖೆಗೆ ಜಿಲ್ಲೆಯ ಎಲಲ್ ಅಧಿಕಾರಿಗಳು ಅಗತ್ಯ ಸಹಾಯ ಒದಗಿಸಬೇಕು. ಮಾದಕ ಬೆಳೆಗಳನ್ನು ಗುರುತಿಸು ಮ್ಯಾಪ್ ಡ್ರಗ್ಸ್ ಆ್ಯಪ್ ಕುರಿತು ಎಲ್ಲಾ ಪೊಲೀಸ್ ಠಾಣೆಗಳಿಗೆ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳಿಗಳಿಗೂ ಮುಂದಿನ ಆರು ತಿಂಗಳೊಳಗಾಗಿ ಕಡ್ಡಾಯ ತರಬೇತಿ ನೀಡಬೇಕು. ಅಕ್ರಮ ಮಾದಕ ವಸ್ತುಗಳ ಪೂರೈಕರ ಕಡಿಮೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಗುರಿಗಳನ್ನು . ನಿಗದಿಪಡಿಸಬೇಕು. ಡ್ರಗ್ಸ್ ಹಾವಳಿಯನ್ನು ತಡೆಯಲು ಇಲಾಖೆಯು ಅಭಿವೃದ್ಧಿಪಡಿಸಿರುವ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಕನ್ನಡದಲ್ಲಿಯೂ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ರಾಜ್ಯದಲ್ಲಿ 350 ಕ್ಕೂ ಹೆಚ್ಚು ವ್ಯಸನ ಮುಕ್ತ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪಿಸಿರುವ 30 ಹಾಸಿಗೆಗಳ ನಿರ್ವಹಣೆಗೆ ಸಂಬAಧಿಸಿದ ಎಸ್‌ಒಪಿ ಸಿದ್ದಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿರುವ ಬಗ್ಗೆ ಪ್ರಚಾರ ಮಾಡಬೇಕು. ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಒಂದು ಹಾಗೂ ಖಾಸಗಿಯಾಗಿ ನಾಲ್ಕು ವ್ಯಸನ ಮುಕ್ತ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಜಿಲ್ಲಾಸ್ಪತ್ರೆಯಲ್ಲಿರುವ ವ್ಯಸನಮುಕ್ತ ಕೇಂದ್ರದಲ್ಲಿ ಆಪ್ತಸಮಾಲೋಚನೆ, ಚಿಕಿತ್ಸೆ ಎಲ್ಲವೂ ಸಂಪೂರ್ಣ ಉಚಿತವಾಗಿರುತ್ತವೆ. ಸಂತ್ರಸ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಎಲ್ಲ ಕೇಂದ್ರಗಳು ರೋಗಿಗಳ ಗೌಪ್ಯತೆಯನ್ನು ಕಾಪಾಡಲು ಹೆಚ್ಚು ಆದ್ಯತೆ ನೀಡಬೇಕು. ಅಗತ್ಯ ಚಿಕಿತ್ಸೆ, ಆಪ್ತಸಮಾಲೋಚನೆಗೆ ಪ್ರಾಮುಖ್ಯತೆ ನೀಡಬೇಕು. ವ್ಯಸನಕ್ಕೆ ಒಳಗಾದವರು ಅಥವಾ ಸಾರ್ವಜನಿಕರು ಹೆಚ್ಚಿನ ಮಾಹಿತಿ ಹಾಗೂ ಸೌಲಭ್ಯಕ್ಕಾಗಿ ಸರ್ಕಾರದ ಮಾನಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ಸಹಾಯವಾಣಿ ಸಂಖ್ಯೆ: 1933 ಗೆ ಕರೆ ಮಾಡಿ ಉಚಿತ ಆಪ್ತಸಮಾಲೋಚನೆ ಸೇವೆ ಪಡೆಯಬಹುದು. ಡ್ರಗ್ಸ್ ಫ್ರೀ ಕರ್ನಾಟಕ ಆ್ಯಪ್ ಕುರಿತು ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ನೆಹರು ಯುವ ಕೇಂದ್ರದಿAದ ವ್ಯಾಪಕ ಪ್ರಚಾರ ನೀಡಬೇಕು. ಪ್ರತಿಯೊಬ್ಬರೂ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅದರ ಸದುಪಯೋಗ ಪಡೆದುಕೊಳ್ಳುವಂತೆ ಮನವೊಲಿಸಬೇಕು. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ ಭೂಮಿಯಲ್ಲಿ ಕೃಷಿ ಬೆಳೆಗಳ ನಡುವೆ ಗಾಂಜಾ ಬೆಳೆಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕೃಷಿ ಇಲಾಖೆಯಿಂದ ಈ ಬಗ್ಗೆ ನಿಯಮಿತ ತಪಾಸಣೆ ನಡೆಸಬೇಕು. ಗಾಂಜಾ ಅಫೀಮು, ತಂಬಾಕು ಮತ್ತು ಇತರ ಅಕ್ರಮ ಬೆಳೆಗಳ ಕೃಷಿಯನ್ನು ನಿಲ್ಲಿಸಲು ಹೊಸ ರೀತಿಯ ಅಥವಾ ಪರ್ಯಾಯ ಬೆಳೆ ಬೆಳೆಯಲು ರೈತರನ್ನು ಉತ್ತೇಜಿಸಬೇಕು. ಅಬಕಾರಿ ಇಲಾಖೆಯವರು ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಜಿಲ್ಲೆಯ ಬಾರ್‌ಗಳಲ್ಲಿ ಡ್ರಗ್ಸ್ ಬಳಕೆಯ ಕುರಿತು ಪರಿಶೀಲನೆ ನಡೆಸಬೇಕು. ಬಾರ್‌ಗಳಲ್ಲಿ ಎನ್‌ಸಿಬಿ ಯ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು.
ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪ್ರಾಥಮಿಕ ಶಿಕ್ಷಣ, ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ವಸತಿ ನಿಲಯ, ಪದವಿ, ಇಂಜಿನಿಯರಿAಗ್ ಮೆಡಿಕಲ್ ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಡ್ರಗ್ಸ್ ಟೆಸ್ಟಿಂಗ್ ಕಿಟ್‌ಗಳ ಮೂಲಕ ಪರೀಕ್ಷೆ ನಡೆಸಬೇಕು. ಮಾದಕವಸ್ತುಗಳ ಬಳಕೆಯ ಪ್ರಕರಣಗಳು ಪತ್ತೆಯಾದಲ್ಲಿ ಸಂಬAಧಪಟ್ಟ ವಾರ್ಡನ್ ಅಥವಾ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಡಿಡಿಪಿಐ ಸೋಮಶೇಖರಗೌಡ ಪಾಟೀಲ, ಕಿಮ್ಸ್ನ ತಂಬಾಕು ನಿಯಂತ್ರಣ ಕೋಶದ ಕೋ-ಆರ್ಡಿನೇಟರ್, ಅರಣ್ಯ ಇಲಾಖೆ ಅಧಿಕಾರಿ, ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.