ರಾಯಚೂರು ಕೃಷಿ ಮೇಳ: ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜನವರಿ 13, (ಕರ್ನಾಟಕ ವಾರ್ತೆ): ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ಜನವರಿ ತಿಂಗಳಿನಲ್ಲಿ ರಾಯಚೂರು ಮುಖ್ಯ ಆವರಣದಲ್ಲಿ ಆಯೋಜಿಸಿರುವ ಕೃಷಿ ಮೇಳದ ಪ್ರಯುಕ್ತ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ಜಿಲ್ಲಾವಾರು ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆಯನ್ನು ಗುರುತಿಸಿ ಪ್ರಮಾಣ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತಿದ್ದು, ಅರ್ಹ ಕೃಷಿಕ ಹಾಗೂ ಕೃಷಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿಗೆ ಸಂಬAಧಿಸಿದ ಹೊಸ ತಂತ್ರಜ್ಞಾನಗಳ ಬಗ್ಗೆ ರೈತ ಬಾಂಧವರಿಗೆ ಮಾಹಿತಿ ಒದಗಿಸುವುದು ಹಾಗೂ ಅವುಗಳನ್ನು ಅಳವಡಿಸಲು ಪ್ರೇರೇಪಿಸುವುದು ಕೃಷಿ ಮೇಳದ ಉದ್ದೇಶವಾಗಿದೆ. ಪ್ರಶಸ್ತಿಗೆ ಸಂಬAಧಿಸಿದ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ವೆಬ್ಸೈಟ್ https://uasraichur.karnataka.
ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ರಾಯಚೂರು, ಬೀದರ, ಕಲಬುರಗಿ, ರದ್ದೇವಾಡಗಿ, ಗಂಗಾವತಿ, ಕವಡಿಮಟ್ಟಿ, ಹಗರಿ ಮತ್ತು ಮುಖ್ಯಸ್ಥರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಭೀಮರಾಯನಗುಡಿ, ಲಿಂಗಸೂಗೂರು, ಕೊಪ್ಪಳ, ನಾಲವಾರ, ದೇವದುರ್ಗ, ಹೂವಿನಹಡಗಲಿ ಅಥವಾ ಮೊ.ಸಂ : 9480696314/315/316/317/318/




