
ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯ: ಪ್ರೊ. ಕೃಷ್ಣಸ್ವಾಮಿ ಅಭಿಮತ

Education Department launches sports competitions

ಬೆಂಗಳೂರು: ಜ.21: ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಾಣಾರ್ಥಿಗಳಿಂದ ಪ್ರಥಮ ವರ್ಷದ ಪ್ರಶಿಕ್ಷಾಣಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಬುಧವಾರದಂದು ಕ್ರೀಡಾ ಚಟುವಟಿಕೆಯ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ನಿಖಾಯದ ಡೀನ್ ಹಾಗೂ ದೈಹಿಕ ಶಿಕ್ಷಣ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಸ್ವಾಮಿ ಪಿ.ಸಿ ಅವರು ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳಲ್ಲಿ ನಿರತರಾಗಿದ್ದರೆ ಮಾತ್ರ ದೇಹದ ಸದೃಢತೆ ಸಾಧ್ಯ. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವ ಸುಲಭ ಮಾರ್ಗವೇ ಪ್ರಾಣಾಯಾಮ.
ಶಿಕ್ಷಕರಿಗೆ ತಾಳ್ಮೆ, ಅತ್ಮಸ್ಥೆರ್ಯ ಬರಬೇಕಾದರೆ ದಿನದ ಇಪ್ಪತ್ತು ನಾಲ್ಕು ಗಂಟೆಗಳಲ್ಲಿ ಒಂದು ಗಂಟೆಯಾದರೂ ದೈಹಿಕ ವ್ಯಾಯಾಮಕ್ಕೆ ಮೀಸಲು ಇಡಬೇಕು. ಹಾಗೆ ದೇಹವನ್ನು ದಂಡಿಸಿದರೆ ದೇವರನ್ನು ಕಾಣಬಹುದು ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ಪ್ರಸ್ಥಾಪಿಸಿದರು.
ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು, ಪ್ರೊ. ಎಂ.ಸಿ. ಎರ್ರಿಸ್ವಾಮಿ, ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿಗಳು, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಾಣಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.


