
ಎಲ್ಲ ರಂಗದಲ್ಲೂ ಮಹಿಳೆಯರಿಗೆ ಸಮಾನ ಅವಕಾಶ ದೊರೆಯಲಿ-ವಡ್ಡರಹಟ್ಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅಭಿಮತವಡ್ಡರಹಟ್ಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅಭಿಮತ

Women should be given equal opportunities in all fields - Grama Panchayat Development Officer Suresh Chalwadi's opinion

ಗಂಗಾವತಿ : ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ತಿಳಿಸಿದರು.
ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಇಂದು ಎಲ್ಲ ರಂಗದಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದು, ಮಹಿಳೆಯರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆ ಇದೆ ಎಂದು ಹೇಳಿದರು.
ಶಾಲೆ ಆವರಣದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಎನ್ ಆರ್ ಎಲ್ ಎಂ ಸಂಜೀವಿನ ಒಕ್ಕೂಟ ಸದಸ್ಯರು & ಕೂಸಿನ ಮನೆ ಮಹಿಳೆ ಆರೈಕೆದಾರರಿಗೆ ಗ್ರಾಪಂ ವತಿಯಿಂದ ದೇಶಿ ಕ್ರೀಡೆಗಳನ್ನು ಆಡಿಸಲಾಯಿತು.
ಈ ವೇಳೆ, ಗ್ರಾಪಂ ಕಾರ್ಯದರ್ಶಿ ಈಶಪ್ಪ, ಕರವಸೂಲಿಗಾರ ಆಂಜನೇಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು.




