
ಎಮ್ ಎಸ್ ದೊಡ್ಡಿಯ ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲ . ಮುಖಂಡರಾದ ಶಿವಕುಮಾರ್ .

MS Doddi's school children do not have drinking water. Leader Shivakumar.

ವರದಿ : ಬಂಗಾರಪ್ಪ .ಸಿ.
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಹಲವು ಪ್ರದೇಶದಲ್ಲಿ ಕುಡಿಯಲು ನೀರಿಲ್ಲ ಜೊತೆಯಲ್ಲಿ ಎಮ್ ಎಸ್ ದೊಡ್ಡಿ ಎಂಬ ಗ್ರಾಮದಲ್ಲಿ ಸಾರ್ವಜನಿಕರಿಗೂ ಸೇರಿದಂತೆ ಶಾಲಾ ಮಕ್ಕಳಿಗೂ ಶಿಕ್ಷಣದ ಜೊತೆಯಲ್ಲಿ ನೀರನ್ನು ನೀಡದ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಗ್ರಾಮದ ಮುಖಂಡರಾದ ಎಮ್ ಎಸ್ ಶಿವಕುಮಾರ್ ತಿಳಿಸಿದರು .
ನಂತರ ಮಾತನಾಡಿದ ಅವರು
ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಮ್ ಎಸ್ ದೊಡ್ಡಿಯಲ್ಲಿ ಇತ್ತಿಚಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು ನಾವು ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಮೇಲಾಧಿಕಾರಿಗಳ ಗಮನಕ್ಕೆ ತಂದರು ಸಹ ಯಾವುದೇ ಪ್ರಯೋಜನವಾಗಿಲ್ಲ ,ಇದೇ ಪರಿಸ್ಥಿತಿ ಮುಂದುವರೆದರೆ ಹನೂರು ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.



