ಜಿಲ್ಲಾ ಮಟ್ಟದ ಕೆ.ಡಿ.ಪಿ ಸಭೆ ಮುಂದೂಡಿಕೆ
ಜಾಹೀರಾತು

District level KDP meeting postponed
ಕೊಪ್ಪಳ ಜನವರಿ 31 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ 3ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ವಿಧಾನ ಮಂಡಲ ಅಧಿವೇಶನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಈ ಸಭೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




