
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ: ನ್ಯಾ. ಮಹಾಂತೇಶ ಎಸ್. ದರಗದ
Resolve cases through conciliation: Justice Mahantesh S. Dargada

ಕೊಪ್ಪಳ ಫೆಬ್ರವರಿ 12, (ಕರ್ನಾಟಕ ವಾರ್ತೆ): ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ
ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಮಾರ್ಚ್ 14 ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್‌ನ ಅಂಗವಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಹಳಷ್ಟು ಜನರಿಗೆ ಕಾನೂನಿನ ಅರಿವೇ ಇಲ್ಲ. ಈ ಕುರಿತು ನಾವೆಲ್ಲರೂ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ. ರಾಷ್ಟಿçÃಯ ಲೋಕ ಅದಾಲತ್ ನಡೆಯುತ್ತಿರುವ ಕುರಿತು ಹೆಚ್ಚಿನ ಪ್ರಚಾರ ನೀಡಿ. ನಗರಸಭೆ ವಾಹನಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಈ ಕುರಿತು ಹೆಚ್ಚು ಪ್ರಚಾರ ಆಗಬೇಕು. ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾದರೆ ಜನರ ಸಮಯ ಮತ್ತು ಅವರ ಸಂಬAಧಗಳು ಉಳಿಯುತ್ತವೆ. ಈ ಸಲ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಇದ್ದು, ಇದಕ್ಕೆ ತಮ್ಮೆಲ್ಲರ ಸಹಕಾರ ಬೇಕಾಗುತ್ತದೆ ಎಂದು ಹೇಳಿದರು.
ಬಹಳಷ್ಟು ಪ್ರಕರಣಗಳು ಕುಟುಂಬದ ಅಕ್ಕ- ಅಣ್ಣ ತಮ್ಮಂದಿರ ಪಾಲು ಕೊಡುವಂತವುಗಳೇ ಆಗಿರುತ್ತವೆ. ಅವುಗಳನ್ನು ಮನೆಯಲ್ಲಿ ಕುಳಿತು ಬಗೆಹರಿಸಿಕೊಳ್ಳಬಹುದು. ಆದರೆ ಅವುಗಳು ಕೋರ್ಟಿಗೆ ಬರುತ್ತವೆ. ವಿಚ್ಛೇದನ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ನಾನು ಎನ್ನುವ ಅಹಂ ಭಾವದಿಂದ ತಮ್ಮ ಕುಟುಂಬವನ್ನೇ ಹಾಳು ಮಾಡಿಕೊಳ್ಳುವ ಹಂತಕ್ಕೆ ಬರುತ್ತವೆ. ಇಬ್ಬರೂ ಪರಸ್ಪರ ಹೊಂದಾಣಿಕೆಯಿAದ ಜೀವನ ನಡೆಸಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಇಂದು ಎಲ್ಲರೂ ಸ್ವತಂತ್ರ ಜೀವನದಲ್ಲಿ ಬದುಕುವಂತವರಾಗಿದ್ದಾರೆ. ಮಾರ್ಚ್ 14 ರಂದು ರಾಜ್ಯದಾದ್ಯಂತ ನಡೆಯುವ ರಾಷ್ಟಿçÃಯ ಲೋಕ್ ಅದಾಲತ್‌ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ತಹಶೀಲ್ದಾರ ಬಸವರಾಜ, ಪರಿಸರ ಇಲಾಖೆ ಅಧಿಕಾರಿ ವೈ.ಎಸ್. ಹರಿಶಂಕರ್, ಅಬಕಾರಿ ಉಪಾಧೀಕ್ಷಕರಾದ ಆಂಜನೇಯ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸುರೇಶ ಜಿ., ಲೇಬರ್ ಇನ್ಸ್ಪೆಕ್ಟರ್ ಮಂಜುಳಾ ಸೇರಿದಂತೆ ನಗರಸಭೆ, ಸಾರಿಗೆ, ಅರಣ್ಯ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




