ಫೆ. 17ರಂದು ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸಭೆ
Koppal District Planning Committee meeting on Feb. 17
ಕೊಪ್ಪಳ ಫೆಬ್ರುವರಿ 12 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿಯ ಸಭೆಯನ್ನು ಫೆಬ್ರುವರಿ 17 ರಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಸಭೆಯ ಅಧ್ಯಕ್ಷತೆವಹಿಸುವರು. ಸಂಬAಧಿತ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




