
ಫೆ.16 ರಂದು ಕೊಪ್ಪಳದಲ್ಲಿ ಮಡಿವಾಳ ಮಾಚಿದೇವ ಜಯಂತಿ
Madiwala Machideva Jayanti to be celebrated in Koppal on Feb. 16

ಕೊಪ್ಪಳ ಫೆಬ್ರವರಿ 13, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮದ ಜೀವನ ಕೌಶಲ್ಯ ತರಬೇತಿದಾರರು, ಪ್ರೇರಣೆ ಮಾತುಗಾರರು ಹಾಗೂ ಸದಸ್ಯರಾದ ಜೆ.ಸಿ.ರಾಜಶೇಖರ ಬಳ್ಳಾರಿ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪಾಲ್ಗೊಳ್ಳುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




