ಫೆ.17 ರಂದು ಕೊಪ್ಪಳದಲ್ಲಿ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ
Guarantee Workshop and Guarantee Festival in Koppal on Feb. 17
ಕೊಪ್ಪಳ ಫೆಬ್ರವರಿ 16, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮವನ್ನು ಫೆಬ್ರವರಿ 17 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಮಧುಶ್ರೀ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ (ಕಲಬುರಗಿ ವಿಭಾಗ) ಎಸ್.ಆರ್.ಮೆಹರೋಜ್ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ(ಬೆಳಗಾವಿ ವಿಭಾಗ) ಎಸ್..ಆರ್.ಪಾಟೀಲ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ(ಮೈಸೂರು ವಿಭಾಗ) ಡಾ.ಪುಷ್ಪಾ ಅಮರನಾಥ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ(ಬೆಂಗಳೂರು-1 ವಿಭಾಗ) ಸೂರಜ್ ಹೆಗಡೆ, ವಿಧಾನ ಪರಿಷತ್ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ(ಬೆಂಗಳೂರು-2 ವಿಭಾಗ) ದಿನೇಶ ಗೂಳಿಗೌಡ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಗಂಗಾವತಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟೇಶಬಾಬು, ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಾಲಚಂದ್ರ ಸ್ಯಾಮುವೆಲ್, ಕಾರಟಗಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ದೇವಪ್ಪ ಭಾವಿಕಟ್ಟಿ, ಕುಷ್ಟಗಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಫಾರೂಕ್ ಡಲಾಯತ್, ಯಲಬುರ್ಗಾ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸುಧೀರ್ ಶಾಮಾಚಾರ ಕೊರ್ಲಹಳ್ಳಿ, ಕುಕನೂರು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದಸಂಗಪ್ಪ ವೀರಪ್ಪ ಗುತ್ತಿ, ಕನಕಗಿರಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹಜರತ್ ಹುಸೇನ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು ಆಗಮಿಸುವರು.
ಬೆಂಗಳೂರಿನ ಜಾಗೃತ ಕರ್ನಾಟಕದ ಸಂಚಾಲಕರಾದ ಡಾ.ಬಸವರಾಜು ಬಿ.ಸಿ ಅವರು ರಾಜ್ಯದ ಸಮಗ್ರ ಅಭಿವೃದ್ಧಿ ಚಾಲಕ ಶಕ್ತಿಯಾಗಿ ಗ್ಯಾರಂಡಿಗಳು ವಿಚಾರ ಕುರಿತು ಉಪನ್ಯಾಸ ನೀಡುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅವರು ಪಾಲ್ಗೊಳ್ಳುವರು.
ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ವಿಶ್ವನಾಥ ಎಂ.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಶೀನಯ್ಯ, ಜೆಸ್ಕಾಂ ಕೊಪ್ಪಳ ವಿಭಾಗದ ಕಾರ್ಯಪಾಲಕ ಅಭಿಯಂತರ ಮೋಟ್ಲಾ ನಾಯಕ ಎಂ., ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ, ಗಂಗಾವತಿ ಜೆಸ್ಕಾಂ ವಿಭಾಗದ ಕಾರ್ಯಪಾಲಕ ಅಭಿಯಂತರ ಎಂ.ವಿರೇಶ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.




