ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.
Karnataka Provincial Farmers' Association demands justice for Kudathini land victims.
ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.


ಬಳ್ಳಾರಿ: ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕುಡತಿನಿ ಸೇರಿದಂತೆ ಹಲವು ಗ್ರಾಮಗಳ ರೈತರ ಭೂ ಸಮಸ್ಯೆಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಆಗ್ರಹಿಸಿದೆ.
ಸಂಘದ ಆರೋಪದ ಪ್ರಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಡತಿನಿ, ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕೊಳಗಲ್ಲು, ಎರ್ರೆಂಗಳಿ ಮತ್ತು ಸಿದ್ದಮ್ಮನಹಳ್ಳಿ ಗ್ರಾಮಗಳ ಸುಮಾರು 13 ಸಾವಿರ ಎಕರೆ ಜಮೀನುಗಳನ್ನು ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆಗಳಿಗಾಗಿ ಸ್ವಾಧೀನಪಡಿಸಿಕೊಂಡು ಕಳಪೆ ಬೆಲೆ ನಿಗದಿ ಮಾಡಲಾಗಿದೆ. ಇದರಿಂದ ಸಾವಿರಾರು ರೈತ ಕುಟುಂಬಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 16 ವರ್ಷಗಳಿಂದ ಕೈಗಾರಿಕೆಗಳು ಸ್ಥಾಪನೆಯಾಗದೆ ರೈತರಿಗೆ ಉದ್ಯೋಗವೂ ಸಿಗಲಿಲ್ಲ, ಇದರಿಂದ ರೈತರು ದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ.
ಆದ್ದರಿಂದ ವಂಚಕ ಭೂ ಬೆಲೆ ರದ್ದುಪಡಿಸಿ, ರೈತರಿಗೆ ನ್ಯಾಯಸಮ್ಮತ ಭೂ ಬೆಲೆ ನಿಗದಿ ಮಾಡಬೇಕು ಅಥವಾ ಜಮೀನುಗಳನ್ನು ಮರಳಿ ನೀಡಬೇಕು. ಜೊತೆಗೆ 16 ವರ್ಷಗಳ ನಿರುದ್ಯೋಗ ಭತ್ಯೆಯಾಗಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ರೈತ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ಹೊಸಳ್ಳಿ, ಜಿಲ್ಲಾ ಕಾರ್ಯದರ್ಶಿ ಶಿವಣ್ಣ ಬೆಣಕಲ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
