Application Invitation for Self Employed Training
ಕೊಪ್ಪಳ , (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ 10 ದಿನಗಳ ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ಮತ್ತು ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಮೊ.ಸಂ: 9483618178, 9481085217, 7259073827, 9448941414 ಇಲ್ಲಿಗೆ ಸಲ್ಲಿಸಬೇಕು.
ಸ್ವಯಂ ಉದ್ಯೋಗ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಸೆಪ್ಟೆಂಬರ್ 06ರಂದು ಸಂದರ್ಶನ ನಡೆಯಲಿದ್ದು, ಸೆಪ್ಟೆಂಬರ್ 07ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.