Parashuram Kerehalli appointed as Davangere by-election in-charge

ದಾವಣಗೆರೆ ಉಪಚುನಾವಣೆ ಉಸ್ತುವಾರಿಯನ್ನಾಗಿ ಪರಶುರಾಮ್ ಕೆರೆಹಳ್ಳಿ ನೇಮಕ
ಕೊಪ್ಪಳ:- ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಕೆಪಿಸಿಸಿ ಕಚೇರಿ ಬೆಂಗಳೂರು ಕೆಪಿಸಿಸಿ ವತಿಯಿಂದ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರ ಗೆಲುವಿಗಾಗಿ ಶ್ರಮಿಸುವಂತೆ ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ಆರ್ ಧರ್ಮ ಸೇನ್ ರವರು ಪರಶುರಾಮ್ ಕೆರೆಹಳ್ಳಿ ರವರನ್ನು ದಾವಣಗೆರೆಯ ಉಪಚುನಾವಣೆಯ ಉಸ್ತುವಾರಿಯನ್ಯಾಗಿ ನೇಮಿಸಿದ್ದಾರೆ.
ರಾಜ್ಯದ ಕೆಪಿಸಿಸಿ ಎಸ್ ಸಿ ವಿಭಾಗದ ಅಧ್ಯಕ್ಷರಾದ ಶ್ರೀ ಆರ್ ಧರ್ಮ ಸೇನ್ ರವರು ರಾಜ್ಯದ ಎಲ್ಲಾ ಜಿಲ್ಲಾ ಮಾಧ್ಯಮ ವಕ್ತಾರರನ್ನು ನೇಮಕ ಮಾಡುವ ಮೂಲಕ ಚುನಾವಣಾ ಕಾರ್ಯ ಚಟುವಟಿಕೆಗಳಿಗೆ ಮತ್ತಷ್ಟು ಚುರುಕು ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಜವಾಬ್ದಾರಿಗಳನ್ನು ಕೊಟ್ಟು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಯಾಗಿ ಶ್ರಮಿಸುವಂತೆ ತಿಳಿಸಿದ್ದಾರೆ. ಆದ್ದರಿಂದ ಕೊಪ್ಪಳ ಜಿಲ್ಲೆಯ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರರಾದ ಶ್ರೀ ಪರಶುರಾಮ್ ಕೆರೆಹಳ್ಳಿ ಅವರಿಗೆ ಪ್ರಮುಖ ಜವಾಬ್ದಾರಿಯನ್ನು ಕೊಟ್ಟು ಚುನಾವಣಾ ಪ್ರಚಾರ, ಮಾಧ್ಯಮ ಸಂಪರ್ಕ ಮತ್ತು ಪಕ್ಷದ ಸಂದೇಶವನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರ ಆಶೀರ್ವಾದದಿಂದ, ಕಾಂಗ್ರೆಸ್ ಮುಖಂಡರ ಸಹಕಾರದೊಂದಿಗೆ ನನ್ನನ್ನು ದಾವಣಗೆರೆ ಉಪಚುನಾವಣೆ ಪ್ರಚಾರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ನನ್ನನ್ನು ನೇಮಕ ಮಾಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರ ರವರಿಗೂ ಹಾಗೂ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ ಸಾಹೇಬರ ರವರಿಗೂ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ಎಸ್ ತಂಗಡಗಿ ರವರಿಗೂ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಸನ್ಮಾನ್ಯ ಶ್ರೀ ರಾಯರೆಡ್ಡಿ ರವರಿಗೂ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ಕೆ.ರಾಘವೇಂದ್ರ ಹಿಟ್ನಾಳ್ ರವರಿಗೂ ಜನಪ್ರಿಯ ಸಂಸದರಾದ ಶ್ರೀ ಕೆ.ರಾಜಶೇಖರ್ ಹಿಟ್ನಾಳ್ ವರಿಗೂ, ಮಾಜಿ ಸಂಸದರಾದ ಸಂಗಣ್ಣ ಕರಡಿಗಜೀ ರವರಿಗೂ ಹಾಗೂ ಹಾಗೂ ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ಆರ್ ಧರ್ಮಸೇನ ರವರಿಗೂ, ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಗಾಳೆಪ್ಪ ಎಚ್ ಪೂಜಾರ್ ಅವರಿಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಗೂಳಪ್ಪ ಹಲಗೇರಿ ರವರಿಗೂ, ಕೊಪ್ಪಳ ನಗರಸಭೆ ಮಾಜಿ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರಿಗೂ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ವರಿಷ್ಠರಿಗೂ, ಹಿರಿಯ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರಿಗೂ ಇವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದು ಪರಶುರಾಮ್ ಕೆರೆಹಳ್ಳಿ ಅವರು ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
