Grilahakshmi Yojana Cooperative for Economic Empowerment of Women : Dodamani

ಕೂಡಲಸಂಗಮ:: ಕರ್ನಾಟಕ ರಾಜ್ಯ ಸರ್ಕಾರದ ಅತೀ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಬಡ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಹೇಳಿದರು.
ಸಮೀಪದ ಬಿಸಲದಿನ್ನಿ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಅವರು ರಾಜ್ಯದ ಬಡ ಮಹಿಳೆಯರಿಗೆ ನೇರ ನಗದು ವರ್ಗಾವಣೆ ಮೂಲಕ ಮನೆಯ ಯಜಮಾನಿಗೆ ಶಕ್ತಿ ತುಂಬುವ ಕೆಲಸ ಮಾಡುವ ಕಾರ್ಯ ಅವಿಸ್ಮರಣೀಯವಾದುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತೆವ್ವ ಹಿರೇಗೌಡರ ಅವರು ಈ ಯೋಜನೆ ಹಲವಾರು ಬಡ ಕುಟುಂಬದ ಆಸರೆಯಾಗಿದೆ. ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಸಲದಿನ್ನಿ ಗ್ರಾಮ ಪಂಚಾಯತ್ ಸದಸ್ಯರು, ಮುಖಂಡ ಭೀಮಣ್ಣ ಯರಝೇರಿ,ವಸಂತ ದೇಶಪಾಂಡೆ,ಮುದಿಗೌಡ ಮೇಟಿ,ಬಾಲೇಶ ಹಿರೇಗೌಡರ, ಅಭಿವೃದ್ಧಿ ಅಧಿಕಾರಿ ಅಯ್ಯಣ್ಣ ಗದ್ದೇರ , ಕಾರ್ಯದರ್ಶಿ ನಾಗೋಜಿ ಮೀರಜಕರ ಹಾಗೂ ಪಂಚಾಯತ್ ವ್ಯಾಪ್ತಿಯ ಗುರು ಹಿರಿಯರು ಹಾಗೂ ಯುವಕ ಮಿತ್ರರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Kalyanasiri Kannada News Live 24×7 | News Karnataka