ಜಿಲ್ಲಾಧ್ಯಕ್ಷರಾಗಿ ಸುರೇಶ ಚಲವಾದಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಸೌಮ್ಯ ಆಯ್ಕೆ

Mallikarjun
1 Min Read

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suresh Chalwadi elected as district president, Mallikarjuna, Soumya elected as vice president




ಜಿಲ್ಲಾಧ್ಯಕ್ಷರಾಗಿ ಸುರೇಶ ಚಲವಾದಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಸೌಮ್ಯ ಆಯ್ಕೆ

ಕೊಪ್ಪಳ : ಕೊಪ್ಪಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಇತ್ತೀಚೆಗೆ ನಡೆದ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) ಜಿಲ್ಲಾ ಘಟಕದ ಸಮಿತಿ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ
ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) ಜಿಲ್ಲಾ ಘಟಕಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಸುರೇಶ ಚಲವಾದಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಸೌಮ್ಯ ಕೆ. ಆಯ್ಕೆಯಾದರು. ನಿಂಗಪ್ಪ ಮೂಲಿಮನಿ (ಖಜಾಂಚಿ), ಶಿವಬಸಪ್ಪ ( ರಾಜ್ಯ ಪರಿಷತ್ ಸದಸ್ಯ), ಶ್ರೀಶೈಲ್ ಪೊಲ್ಮೇಶಿ (ಸಂಘಟನಾ ಕಾರ್ಯದರ್ಶಿ) , ಜ್ಯೋತಿ ರಡ್ಡೇರ್ ( ಸಂಘಟನಾ ಕಾರ್ಯದರ್ಶಿ), ವೆಂಕಟೇಶ (ಕ್ರೀಡಾ ಕಾರ್ಯದರ್ಶಿ), ಪುಷ್ಪಲತಾ ಸಿ ( ಸಾಂಸ್ಕೃತಿಕ ಕಾರ್ಯದರ್ಶಿ) ಗಳಾಗಿ ಅವಿರೋಧವಾಗಿ ಆಯ್ಕೆಯಾದರು. ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಸನ್ಮಾನಿಸಿ ಅಭಿನಂದಿಸಿದರು.

ತಾಪಂ ಯೋಜನಾಧಿಕಾರಿಗಳಾದ ರಾಜಾಸಾಬ್ ನಧಾಫ್ ಅವರು ಸಹಾಯಕ ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

Total Views: 0
Share This Article