Take appropriate steps to prevent child marriages in the district: Dr. Suresh Itnal

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ: ಡಾ. ಸುರೇಶ ಇಟ್ನಾಳ
ಕೊಪ್ಪಳ ಏಪ್ರಿಲ್ 01 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದ್ದಾರೆ.
“ಅಕ್ಷಯ ತೃತೀಯ ದಿನದಂದು” ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಅತೀ ಹೆಚ್ಚಾಗಿ ಆಯೋಜನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹಗಳು ಜರುಗುವ ಸಾಧ್ಯತೆಗಳು ಅಧಿಕವಾಗಿರುವುದನ್ನು ಗಮನಿಸಲಾಗಿದೆ. ಈ ಹಿನ್ನಲೆಯಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಕಲಂ 13(4)ರಲ್ಲಿ “For the purpose of preventing solemnisation of mass child marriages on certain days such as “Akshaya Trutiya”, The District Magistrate shall be deemed to be the Child Marriage Prohibition officer with all powers as are conferred on a Child Marriage Prohibition Officer by or under this Act” & in Article 13 (5) “The District Magistrate shall also have additional powers to stop or prevent solemnization of child marriages and for this purpose, he may take all appropriate measures and use the minimum force required” ಎಂದು ಬಾಲ್ಯವಿವಾಹಗಳನ್ನು ತಡೆಗಟ್ಟಲು ಅಧಿಕಾರವನ್ನು ನೀಡಿದೆ.
ಮದುವೆಯ ಹೆಸರಿನಲ್ಲಿ ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಕೊಪ್ಪಳ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲಾ ಹಂತಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ತಡೆಗಟ್ಟಲು ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾಗಿಯೂ, ಇನ್ನೂ ಸಹ ಸಮುದಾಯಗಳಲ್ಲಿ ಸಾಕಷ್ಟು ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹವನ್ನು ಮಾಡುವುದು ಕಂಡುಬರುತ್ತಿದೆ.
ಏಪ್ರಿಲ್ 20ರಂದು “ಅಕ್ಷಯ ತೃತೀಯ” ದಿನ ಇದ್ದು, ಈ ದಿನದಂದು ಹಾಗೂ ಇತರೆ ದಿನಗಳಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚು ಆಯೋಜನೆಯಾಗಬಹುದಾಗಿದೆ. ಈ ಸಂದರ್ಭದಲ್ಲಿ ಬಾಲ್ಯವಿವಾಹಗಳು ನಡೆಯಬಹುದಾದ ಸಾಧ್ಯತೆ ಇರುವುದರಿಂದ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದ ಬಾಲ್ಯ ವಿವಾಹ ನಿಷೇದಾಧಿಕಾರಿಗಳು ಕಡ್ಡಾಯವಾಗಿ ನಿಮ್ಮ ವ್ಯಾಪ್ತಿಯಲ್ಲಿ ನಡೆಯುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ನಿಗಾವಹಿಸಿ ನಿಯಮಾನುಸಾರ ಕಾರ್ಯಪ್ರವೃತ್ತರಾಗಿ, ಸಾಮೂಹಿಕ ವಿವಾಹ ಆಯೋಜಕರಿಗೆ ಮತ್ತು ಸಾರ್ವಜನಿಕರಿಗೆ ಬಾಲ್ಯವಿವಾಹ ನಿಷೇದ ಕಾಯ್ದೆಯ ಕುರಿತು ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮದ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಯ ಅಧೀನದಲ್ಲಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
