Kukanoor: Applications are invited from interested parties to work in the Gram-1 project in the Gram Panchayat.
ಕುಕನೂರು: ಗ್ರಾ.ಪಂ. ನಲ್ಲಿನ ಗ್ರಾಮ-1 ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ಕೊಪ್ಪಳ ಏಪ್ರಿಲ್ 02, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಇಂದ ಗ್ರೇಡ್-1 ಗೆ ನವೀಕರಿಸಲಾದ ಹಾಗೂ ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕುಕುನೂರು ತಾಲೂಕಿನ ಮಂಗಳೂರು, ಭಾನಾಪುರ ಹಾಗೂ ಕುದರಿಮೋತಿ ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಗ್ರಾಮ-1 ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಆಯಾ ಗ್ರಾಮ ಪಂಚಾಯತಿಗಳಲ್ಲಿನ ಆಸಕ್ತರು ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸಿದಲ್ಲಿ ಏಪ್ರಿಲ್ 15 ರೊಳಗಾಗಿ https://sevasindhuservices.karnataka.gov.in/loginWindow.do ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
