ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ ಎಮ್ ಆರ್ ಮಂಜುನಾಥ್

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Let's celebrate Ambedkar Jayanti meaningfully: MLA M R Manjunath




ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ ಎಮ್ ಆರ್ ಮಂಜುನಾಥ್ .

ಜಾಹೀರಾತು


ವರದಿ: ಬಂಗಾರಪ್ಪ .ಸಿ.‌
ಹನೂರು, ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆಯನ್ನು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಿಸಲು ಎಲ್ಲಾರ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರು ಸಮಾಜದ ಜನರ ಒಪ್ಪಿಗೆಯಂತೆ ಸರ್ಕಾರದ ಮಾರ್ಗ ಸೂಚಿಯಂತೆ ಜಯಂತಿ ಆಚರಿಸಲು ತಿಳಿಸಿದ್ದು ಅದರಂತೆ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಎಂದರು.

ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಕೇಶವಮೂರ್ತಿ, ಶಿಕ್ಷಣಾಧಿಕಾರಿ ಮಹೇಶ್, ಕಾವೇರಿ ನಿಗಮದ ಎಇಇ ಕರುಣಾಮಯಿ, ಪರಿಶಿಷ್ಟ ವರ್ಗ ಇಲಾಖೆ ರಾಜೇಶ್, ಪ.ಪಂ. ಮುಖ್ಯಾಧಿಕಾರಿ ರೇಖಾ,ಜಿ.ಪಂ ಎಇಇ ಕುಮಾರ್, ಸಿಡಿಪಿಒ
ಅಂಬಿಕಾ, ಅಗ್ನಿಶಾಮಕ ಮಹೇಶ್,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾಳ್ಯ ರಾಚಪ್ಪ,ಸಮುದಾಯದ
ಮುಖಂಡರಾದ ನಾಗರಾಜು,ಬಸವರಾಜು,ಸಿದ್ದರಾಜು, ಯಜಮಾನರಾದ ಮಹೇಶ್ ಕಿರಣ್, ದಲಿತ್ ಸಿದ್ದರಾಜು,ಲಿಂಗರಾಜು, ದೇವರಾಜು ಹಾಗೂ ಯುವಕರು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article