ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ದಲಿತ ಸೇನೆ ಕಾರ್ಯ ಶ್ಲಾಘನೀಯ: ಡಿವೈಎಸ್ಪಿ ಜೆ.ಎಸ್. ನ್ಯಾಮೇಗೌಡ

Mallikarjun
2 Min Read

Dalit Sena's work in developing a competitive spirit among students is commendable: DySP J.S. Nyamagowda




ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ದಲಿತ ಸೇನೆ ಕಾರ್ಯ ಶ್ಲಾಘನೀಯ: ಡಿವೈಎಸ್ಪಿ ಜೆ.ಎಸ್. ನ್ಯಾಮೇಗೌಡ


ಗಂಗಾವತಿ, ಏಪ್ರಿಲ್ 6:ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ದಲಿತ ಸೇನೆ ಆಯೋಜಿಸುತ್ತಿರುವ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ಡಿವೈಎಸ್ಪಿ ಜೆ.ಎಸ್. ನ್ಯಾಮೇಗೌಡ ಅಭಿಪ್ರಾಯಪಟ್ಟರು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯ ಸಮಿತಿ ಕೊಪ್ಪಳ ಜಿಲ್ಲಾ ದಲಿತ ಸೇನೆ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ, ಜ್ಯೋತಿರಾವ್ ಫುಲೆ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಜೀವನ ಸಾಧನೆಗಳು ವಿದ್ಯಾರ್ಥಿಗಳಿಗೆ ದಾರಿದೀಪವಾಗಿವೆ. ಇಂತಹ ಮಹಾನ್ ವ್ಯಕ್ತಿಗಳ ಕುರಿತು ಪ್ರಶ್ನೆಪತ್ರಿಕೆಗೆ ಉತ್ತರಿಸುವ ಮೂಲಕ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದಲಿತ ಸೇನೆಯ ಜಿಲ್ಲಾಧ್ಯಕ್ಷ ಉ. ಡಿಚಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಹಾನ್ ನಾಯಕರ ಅರಿವು ಮೂಡಿಸುವ ಉದ್ದೇಶದಿಂದ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಸ್ಥಳದಲ್ಲಿಯೇ ಪರೀಕ್ಷೆ ನಡೆಸಿ, ತಜ್ಞರಿಂದ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸುವ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದರು. ವಿಜೇತರಿಗೆ ಕಾರಟಗಿಯಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಕಪೂರ್, ಪ್ರಾಚಾರ್ಯ ಕರಿಗೋಳ, ಕೆ. ಪವನ್, ನ್ಯಾಯವಾದಿ ಶಿವರಾಜ್ ಸೇರಿದಂತೆ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಫಲಿತಾಂಶ ಪ್ರಕಟ:
ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಸ್ಥಳದಲ್ಲಿಯೇ ಪ್ರಕಟಿಸಲಾಗಿದ್ದು, ಆಂಜನೇಯ ಬಂಕಾಪುರ ಪ್ರಥಮ ಸ್ಥಾನ, ಸುಂಕಪ್ಪ ವೆಂಕಟಗಿರಿ ದ್ವಿತೀಯ ಸ್ಥಾನ, ಮುತ್ತಣ್ಣ ಪೂಜಾರಿ (ಕುಷ್ಟಗಿ) ತೃತೀಯ ಸ್ಥಾನ ಪಡೆದರು. ಸಮಾಧಾನಕರ ಬಹುಮಾನವನ್ನು ಮರಿಯಪ್ಪ (ಕು ಕನೂರು) ಮತ್ತು ಶಿವಕುಮಾರ್ (ಯಲಬುರ್ಗಾ) ಪಡೆದರು.
ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 200 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದು, ಇದು ಸಂತಸದ ಸಂಗತಿಯಾಗಿದೆ ಎಂದು ಜಿಲ್ಲಾಧ್ಯಕ್ಷ ಉ. ಡಿಚಪ್ಪ ತಿಳಿಸಿದ್ದಾರೆ.

Total Views: 0
Share This Article