There was a bandana with ganja plants growing in the backyard of the house.
ವರದಿ : ಬಂಗಾರಪ್ಪ ಸಿ
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಜೀರಗೇದ್ದೆ ಗ್ರಾಮದ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಇತನು ಮಾದೇಶ ಬಿನ್ ದಾಸೇಗೌಡ (35) ಬಂಧಿತ ಆರೋಪಿಯಾಗಿದ್ದಾನೆ,
ಘಟನೆ ವಿವರ : ಹನೂರು ತಾಲೂಕಿನ ಜೀರಿಗೆ ಗದ್ದೆ ಗ್ರಾಮದ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೆರೆಗೆ ಹನೂರು ಪೊಲೀಸ್ ಠಾಣೆಯ ಇನ್ಸೆಕ್ಟರ್ ಶಶಿಕುಮಾರ್, ಪೊಲೀಸ್ ಸಬ್ ಇನ್ಸೆಕ್ಟರ್ ಮಂಜುನಾಥ್ ಪ್ರಸಾದ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ಮಾಡಿ ದಾಳಿ ನಡೆಸಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ ,ಇದೇ ಸಮಯದಲ್ಲಿ ಸುಮಾರು 13 ಕೆಜಿ 36 ಗ್ರಾಂ 9 ಹಸಿ ಗಾಂಜಾ ಗಿಡಗಳನ್ನು ವಶಕ್ಕೆಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು.
ಈ ಸಂಬಂಧವಾಗಿ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ,
ದಾಳಿಯಲ್ಲಿ ಮುಖ್ಯ ಪೇದೆಗಳಾದ ರಾಘವೇಂದ್ರ ದೊಡ್ಡ ವೀರಶೆಟ್ಟಿ, ಚಂದ್ರು ಪೇದೆಗಳಾದ ಶಿವಕುಮಾರ್, ರಾಮಕೃಷ್ಣ, ರಾಜು, ಸಂತೋಷ್, ತಾಲೂಕು ವೈದ್ಯಧಿಕಾರಿಗಳಾದ ಡಾ.ಪ್ರಕಾಶ್ ಹಾಗೂ ಹನೂರು ಠಾಣೆಯ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.