ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
World Health Day program




ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ

ಜಾಹೀರಾತು

ತಾವರಗೇರಾ:ಸರಕಾರಿ ಪ್ರಥಮ ದರ್ಜೆ ಕಾಲೇಜು  ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ”ದುಶ್ಚಟಗಳಿಂದ ದೂರಾಗಿ ಮಾನಸಿಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ ” ಡಾ. ರಾಜೇಂದ್ರ ಪ್ರಸಾದ್ ಪ್ರಸ್ತುತ ದಿನಗಳಲ್ಲಿ ಯುವ ಜನರು ದುಶ್ಚಟಗಳಿಗೆ ಬಲಿಯಾಗಿ ಕ್ಯಾನ್ಸರನಂತಹ ಮಹಾಮಾರಿಯು ದಿನದಿಂದ ದಿನಕ್ಕೆ ಯುವಜನರಲ್ಲಿ ಹೆಚ್ಚುತ್ತಿರುವ ಪರಿಣಾಮ ಸಮಾಜದ ಸ್ವಾಸ್ಥ್ಯ ಹದೆಗೆಡುತ್ತದೆ ಎಂದು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿಗಳಾದಂತ ಡಾ. ರಾಜೇಂದ್ರ ಪ್ರಸಾದ್ ರವರು ಅಭಿಪ್ರಾಯಪಟ್ಟರು. ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವರೆಡ್ ಕ್ರಾಸ್ ಹಾಗೂ ವಿವಿಧ ಘಟಕಗಳ ವತಿಯಿಂದ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ “ಸಾಮಾನ್ಯ ಆರೋಗ್ಯ ಜೀವನಶೈಲಿ ಮತ್ತು ಮಾನಸಿಕ ಆರೋಗ್ಯ ” ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ತಮ್ಮ ವಿಚಾರಗಳನ್ನು ಅವರು ಹಂಚಿಕೊಂಡರು. ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕರಾದ ಶ್ರೀಮತಿ ನಿರ್ಮಲಾ ರವರು ಮಾತನಾಡಿ ದೈಹಿಕ ಮಾನಸಿಕ ಆರೋಗ್ಯದಿಂದ ಸದೃಢರಾದರೆ ಮಾತ್ರ ಶಿಕ್ಷಣದ ಸಮರ್ಥತೆ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ ಆರೋಗ್ಯದ ಮಹತ್ವ ಕುರಿತಂತೆ ಸವಿಸ್ತಾರವಾಗಿ ಮಾತನಾಡಿದ ಅವರು ದುಶ್ಚಟಗಳಿಂದ ದೂರಾದ ವಿದ್ಯಾರ್ಥಿಗಳು ಮಾತ್ರ ಮೌಲ್ಯಯುತ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ಮಾತುಗಳನ್ನಾಡಿದ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ಯಮನೂರಪ್ಪ ನವರು ವಿಶ್ವ ಆರೋಗ್ಯ ದಿನಾಚರಣೆಯ ಕಾರ್ಯಕ್ರಮದ ಉದ್ದೇಶ ಹಾಗೂ ವಿದ್ಯಾರ್ಥಿಗಳು ಹೇಗೆ ಆರೋಗ್ಯದಿಂದ ತಮ್ಮ ಬದುಕನ್ನು ಕಾಪಾಡಿಕೊಳ್ಳಬೇಕೆಂದು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಲಾಲ್ ಸಾಬ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ರೆಡ್ಡಿ ಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗುರುರಾಜ ಮಾಲಿ ಪಾಟೀಲ್, ಕಚೇರಿ ಅಧೀಕ್ಷಕರಾದ ಶ್ರೀಮತಿ ಸಾವಿತ್ರಿಬಾಯಿ ಎಸ್ ಬಿರಾದಾರ್ ಹಾಗೂ ಕನ್ನಡ ವಿಷಯದ ಉಪನ್ಯಾಸಕರಾದ ಶ್ರೀ ವಿಜಯ ಕುಮಾರ್ ಕಟ್ಟಿಮನಿ ರವರು ಉಪಸ್ಥಿತರಿದ್ದರು. ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಮಂಜುಳಾ ಕೆ. ಇ. ರವರು ನಿರೂಪಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕುಮಾರಿ ಕವಿತಾ ರವರು ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕರಾದ ಶ್ರೀ ಪಂಚಾಕ್ಷರಯ್ಯ ರವರು ವಂದಿಸಿದರು.

Total Views: 1
Share This Article