
Garbage problem in Islampur - Municipal Council immediately takes action to clean it up

ಇಸ್ಲಾಂಪುರದಲ್ಲಿ ಕಸದ ಸಮಸ್ಯೆ – ತಕ್ಷಣ ಸ್ವಚ್ಛತೆಗೆ ಮುಂದಾದ ನಗರಸಭೆ

ಗಂಗಾವತಿ ನಗರದ ವಾರ್ಡ್ ನಂ.16 ರ ಇಸ್ಲಾಂಪುರ ಪ್ರದೇಶದಲ್ಲಿ ಕಸದ ಸಮಸ್ಯೆ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಪ್ರಜಾಸೇನೆ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ನಬಿ ರಸೂಲ್ ಅವರು ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರು.
ಪ್ರದೇಶದಲ್ಲಿ ಕಸ ತುಂಬಿಕೊಂಡಿರುವುದನ್ನು ಗಮನಿಸಿದ ಅವರು, ತಕ್ಷಣ ನಗರಸಭೆಗೆ ಕರೆ ಮಾಡಿ ಸ್ವಚ್ಛತೆ ಕೈಗೊಳ್ಳುವಂತೆ ಸೂಚಿಸಿದರು. ಅವರ ಮನವಿಗೆ ಸ್ಪಂದಿಸಿದ ನಗರಸಭೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯ ಆರಂಭಿಸಿದರು.
ಈ ತ್ವರಿತ ಕ್ರಮದಿಂದ ಸ್ಥಳೀಯ ನಿವಾಸಿಗಳು ಸಂತೋಷ ವ್ಯಕ್ತಪಡಿಸಿದ್ದು, ನಬಿ ರಸೂಲ್ ಅವರ ಸಮಾಜ ಸೇವೆ ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುವ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಈ ಹಿನ್ನಲೆಯಲ್ಲಿ, ತಮ್ಮ ಕರೆಗೆ ಸ್ಪಂದಿಸಿ ತಕ್ಷಣ ಸ್ವಚ್ಛತೆ ಕೈಗೊಂಡ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧ್ಯಕ್ಷ ನಬಿ ರಸೂಲ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
