
Stop using single-use plastic – PDO Suresh Chalwadi statement

ವಡ್ಡರಹಟ್ಟಿ ಗ್ರಾಪಂ ವಡ್ಡರಹಟ್ಟಿ ಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ
ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೋಟೆಲ್ & ವಿವಿಧ ಅಂಗಡಿಗಳ ಮಾಲೀಕರಿಗೆ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತು ನೋಟಿಸ್ ನೀಡಿ ಅಂಗಡಿಯಲ್ಲಿದ್ದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸೋಮವಾರ ವಶಕ್ಕೆ ಪಡೆಯಲಾಯಿತು.
ಜಿಲ್ಲಾಧಿಕಾರಿಗಳ ಆದೇಶದನ್ವಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರ ಅಧ್ಯಕ್ಷತೆಯಲ್ಲಿ ಎನ್ ಆರ್ ಎಲ್ ಎಂ ಸಿಬ್ಬಂದಿಗಳು, ಸಾಹಸ ಸಂಸ್ಥೆಯ ಸಿಬ್ಬಂದಿಗಳ ತಂಡ ಅಂಗಡಿ ಮತ್ತು ಹೋಟೆಲ್ ಗಳು, ಖಾನಾವಳಿಗಳು, ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಸ್ಪೂನ್, ಟೀ ಕಪ್ಸ್, ಪ್ಲಾಸ್ಟಿಕ್ ಗ್ಲಾಸ್, ಸ್ಟ್ರಾಗಳು ಸೇರಿ ಒಟ್ಟು ಮೊದಲನೇ ಹಂತದಲ್ಲಿ 6 ಕೆ.ಜಿ. ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆಯಲಾಗಿದೆ.
.
ಗ್ರಾಪಂ ಪಿಡಿಓ ಸುರೇಶ ಚಲವಾದಿ ಅವರು ಮಾತನಾಡಿ, ಏಕ ಬಳಕೆ ಪ್ಲಾಸ್ಟಿಕ್ ನಿಂದ ಪರಿಸರ ಹಾಗೂ ಮನುಷ್ಯನ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುತ್ತಿದೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಹೋಟೆಲ್, ಕಿರಾಣಿ ಅಂಗಡಿ ಸೇರಿ ವಿವಿಧ ಅಂಗಡಿಯವರು ಬಳಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿ ನೋಟಿಸ್ ನೀಡಲಾಗಿದೆ. ಒಂದು ವೇಳೆ ಏಕಬಳಕೆ ಪ್ಲಾಸ್ಟಿಕ್ ಮುಂದುವರಿಸಿದರೆ ಪರವಾನಗಿ ರದ್ದು ಪಡಿಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ಸಾಹಸ ಸಂಸ್ಥೆಯ ಸಂಪತ್ ಕುಮಾರ್, ಜೋಗದ ಮಂಜುನಾಥ ಹಾಗೂ ಗ್ರಾ.ಪಂ. ಸಿಬ್ಬಂದಿಗಳು, ಎನ್ ಆರ್ ಎಲ್ ಎಂ ಯೋಜನೆ ಸಿಬ್ಬಂದಿಗಳು ಇದ್ದರು.



