ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅದ್ದೂರಿ ಆಚರಣೆ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Bharat Ratna Constitution Architect Dr. B. R. Ambedkar's 135th birth anniversary is celebrated in grand style.




ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅದ್ದೂರಿ ಆಚರಣೆ.

ಜಾಹೀರಾತು

ಗಂಗಾವತಿ: ನಗರದ ಅಂಬೇಡ್ಕರ್ ವೃತ್ತದಲ್ಲಿ ಭಾರತ್ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾllರಾಜಕುಮಾರ್ ಅಭಿಮಾನಿಗಳ ಸಂಘ ಒಕ್ಕೂಟದ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಮಾತನಾಡಿ, ಅಂಬೇಡ್ಕರ್ ಜಯಂತಿ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ ಸಮಾಜದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಹಾಗೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವುದರ ಮೂಲಕ ಜಯಂತಿಯನ್ನು ಆಚರಿಸಿ ಜೈ ಭೀಮ್ ಎಂದು ಘೋಷಣೆ ಹಾಕಿ ಸಂಭ್ರಮಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗಂಗಾವತಿ ಸರ್ವ ಸಮಾಜದ ಮುಖಂಡರು, ಹಿರಿಯರು, ಗಣ್ಯರು, ಮಹಿಳೆಯರು ಹಾಗೂ ಪುಟ್ಟ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.

ಇದಲ್ಲದೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಇನ್ನೂ ಅನೇಕರು ಸಹ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Total Views: 1
Share This Article