
Applications invited for 6th grade admission in prestigious schools
ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಏಪ್ರಿಲ್ 15 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿಯ ಮತ್ತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಪ್ರತಿಷ್ಠಿತ ಶಾಲೆ ಪೋರ್ಟಲ್‌ನಲ್ಲಿ ಕೊನೆಯ ದಿನಾಂಕದೊಳಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಯಲಬುರ್ಗಾ, ಗಂಗಾವತಿ ಅಥವಾ ಕುಷ್ಟಗಿ ಕಚೇರಿಯಲ್ಲಿ ಆನ್‌ಲೈನ್ ಮುಖಾಂತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ತಹಶೀಲ್ದಾರರವರಿಂದ ಪಡೆದ ಆರ್.ಡಿ ಸಂಖ್ಯೆ ಹೊಂದಿರುವ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ರೂ 2.50 ಲಕ್ಷದೊಳಗಿರಬೇಕು. ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಾಲಕರಿಗೆ ಶೇ. 50 ರಷ್ಟು ಮತ್ತು ಬಾಲಕಿಯರಿಗೆ ಶೇ. 50 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳು, ಸಫಾಯಿ ಕರ್ಮಚಾರಿಗಳ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು, ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ-ತಾಯಿಯನ್ನು ಕಳೆದಿಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲ ಬಾದೆಯಿಂದ ಆತ್ಮಹತ್ಯೆಗೆ ದುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಸೇರಿದಂತಹ ವಿಶೇಷ ವರ್ಗದ ಮಕ್ಕಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ಮೇ 04 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಗಂಗಾವತಿ ಮತ್ತು ಕುಷ್ಟಗಿ ಇವರಿಂದ ಪಡೆದು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರನ್ನು ಸಂಪರ್ಕಿಸುವುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
