
Demand for action against illegal sand mining in Gangavathi.

ಗಂಗಾವತಿಯಲ್ಲಿ ಅಕ್ರಮ ಮರಳು ದಂಧೆ ಕ್ರಮಕ್ಕೆ ಒತ್ತಾಯ.

ಗಂಗಾವತಿ: ನಗರದಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗುತ್ತಿದೆ ಎಂದು ಭಾರತೀಯ ಪ್ರಜಾ ಸೇನೆಯ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಆರಿಫ್ ಅವರು ಆರೋಪಿಸಿದ್ದಾರೆ.
ಮಾಧ್ಯಮಗಳ ಮೂಲಕ ಮಾಹಿತಿ ನೀಡಿದ ಅವರು, ಗಂಗಾವತಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಅನಧಿಕೃತವಾಗಿ ಮರಳು ಸಂಗ್ರಹಿಸಿ, ಯಾವುದೇ ರಾಯಲ್ಟಿ ಪಾವತಿಸದೆ ಟ್ರ್ಯಾಕ್ಟರ್ಗಳ ಮೂಲಕ ನಗರದಲ್ಲೇ ಸಾಗಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಅವರು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು, ತಹಸೀಲ್ದಾರ್ ಕಚೇರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅಕ್ರಮ ಮರಳು ಸಾಗಾಟದಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುವುದರ ಜೊತೆಗೆ ಪರಿಸರಕ್ಕೂ ಹಾನಿ ಉಂಟಾಗುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಕುರಿತು ಗಮನ ಹರಿಸಿ, ಶೀಘ್ರದಲ್ಲಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
