
Karnataka's cultural leader Sri Basaveshwara Jayanti to be celebrated in Koppal on 20th

ಏ. 20 ರಂದು ಕೊಪ್ಪಳದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ

ಕೊಪ್ಪಳ ಏಪ್ರಿಲ್ 16 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿಯನ್ನು ಏಪ್ರಿಲ್ 20 ರಂದು ಸಂಜೆ 6 ಗಂಟೆಗೆ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ,ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಬಾಗಲಕೋಟೆಯ ಕೃಷ್ಣ ಮೇಲ್ದಂಡೆ ಯೋಜನೆ ಹಾಗೂ ಭೂಸ್ವಾದೀನ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್ ಅವರು ಆಗಮಿಸುವರು.
ಹಾರೋಗೇರಿ ಶರಣ ಚಿಂತಕರು ಹಾಗೂ ಹಿರಿಯ ಸಾಹಿತಿಗಳಾದ ವಿ.ಎಸ್. ಮಾಳಿ ಮತ್ತು ಬೆಳಗಾವಿಯ ಬಸವ ಚಿಂತಕರಾದ ಡಾ. ದಾನಮ್ಮ ಝಳಕಿ ಅವರು ಶ್ರೀ ಬಸವೇಶ್ವರರ ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಪಾಲ್ಗೊಳ್ಳುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
