
Application challenging grading dismissed: Karave District President Shivaraj Ullagaddi welcomes

ಗ್ರೇಡಿಂಗ್ ಪ್ರಶ್ನಿಸಿದ್ದ ಅರ್ಜಿ ವಜಾ: ಕರವೇ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ ಸ್ವಾಗತ

ಕೊಪ್ಪಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡಿಂಗ್ ನೀಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವನೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿ ಉಚ್ಚ ನ್ಯಾಯಾಲಯವು ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿರುವ ತೀರ್ಪನ್ನು ಹೆಚ್.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸುತ್ತದೆ ಎಂದು ಕರವೇ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿಂದಿ ಹೇರಿಕೆ ಪರವಾಗಿ ವಾದ ಮಾಡುತ್ತಿದ್ದವರಿಗೆ ಉಚ್ಛ ನ್ಯಾಯಾಲಯ ನೇರವಾಗಿ ಛೀಮಾರಿ ಹಾಕಿದೆ. ಮಾಧ್ಯಮಗಳಲ್ಲಿ ಸಂಪೂರ್ಣ ಹಿಂದಿಯನ್ನು ಕಡೆಗಣಿಸಲಾಗಿದೆ ಎಂಬ ಹೇಳಿಕೆ ಎಲ್ಲೂ ಪ್ರಕಟವಾಗಿಲ್ಲ. ಹೀಗಿದ್ದರೂ ಪೂರ್ವಾಗ್ರಹ ಪೀಡಿತರಾಗಿ ನ್ಯಾಯಾಲಯದಲ್ಲಿ ಅರ್ಜಿದಾರ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಕಿಡಿ ಕಾರಿದ್ದಾರೆ. ಪತ್ರಿಕಾ ಹೇಳಿಕೆ ನೋಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೀರಾ? ಎಂದು ಅರ್ಜಿದಾರರನ್ನು ಪ್ರಶ್ನೆ ಮಾಡಿರುವುದು ಸಮಂಜಸವಾಗಿದೆ ಎಂದು ಶಿವರಾಜ ಉಳ್ಳಾಗಡ್ಡಿ ಹೇಳಿದ್ದಾರೆ.
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯನ್ನು ಹಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಮನಸ್ಸಿಗೆ ಬಂದAತೆ ವ್ಯಾಖ್ಯಾನಿಸಿ ಗೊಂದಲ ಉಂಟು ಮಾಡಿದ್ದರು. ಹಿಂದಿ ಭಾಷೆಯೂ ಸೇರಿ ಮೂರನೆಯ ಭಾಷೆ ಕಲಿಕೆಯನ್ನು ರಾಜ್ಯ ಸರ್ಕಾರ ಹಿಂದೆ ಪಡೆದಿರಲಿಲ್ಲ. ಆದರೆ ಅದನ್ನೇ ತಪ್ಪಾಗಿ ಬಿಂಬಿಸಲಾಗಿತ್ತು ಮತ್ತು ಈ ವಿಷಯವನ್ನು ಉಚ್ಛ ನ್ಯಾಯಾಲಯದವರೆಗೂ ತೆಗೆದುಕೊಂಡು ಹೋಗಲಾಗಿತ್ತು. ಅರ್ಜಿದಾರರಿಗೆ ಮೊದಲು ೫೦ ಸಾವಿರ ರೂಪಾಯಿಯ ದಂಡ ವಿಧಿಸಿದ್ದ ನ್ಯಾಯಾಲಯ ನಂತರ ಅದನ್ನು ೧ ಲಕ್ಷ ರೂಪಾಯಿಗೆ ಏರಿಸಲಾಯಿತು. ಸರ್ಕಾರ ಈ ಕೂಡಲೇ ನಿಯಮಾನುಸಾರ ನಿಯಮಾವಳಿಗಳನ್ನು ರೂಪಿಸಿ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಹಿಂದಿ ಸಾಮ್ರಾಜ್ಯ ಶಾಹಿಗಳ ಹುನ್ನಾರಗಳಿಗೆ ಕರ್ನಾಟಕ ಸರ್ಕಾರ ಮಣೆ ಹಾಕಬಾರದು. ಕರುನಾಡಿನ ಮಕ್ಕಳ ಹಿತಾಸಕ್ತಿ ಕಾಪಾಡಬೇಕು ಎಂದು ಕೊಪ್ಪಳ ಜಿಲ್ಲೆಯ ಕರವೇ ಜಿಲ್ಲಾಧ್ಯಕ್ಷರಾದ ಶಿವರಾಜ ಉಳ್ಳಾಗಡ್ಡಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
