ಭಾರತೀಯ ಪ್ರಜಾ ಸೇನೆ – ಅಲ್ಪಸಂಖ್ಯಾತರ ತಾಲೂಕು ಘಟಕ ರಚನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Indian People's Army - Formation of a Minority Taluk Unit




ಭಾರತೀಯ ಪ್ರಜಾ ಸೇನೆ – ಅಲ್ಪಸಂಖ್ಯಾತರ ತಾಲೂಕು ಘಟಕ ರಚನೆ

ಜಾಹೀರಾತು

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಅಲ್ಪಸಂಖ್ಯಾತರ ಜಿಲ್ಲಾ ಸಮಿತಿ ವತಿಯಿಂದ ದಿನಾಂಕ 16/04/2026 ರಂದು ಗುರುವಾರ ಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ನಬಿ ರಸೂಲ್ ಅವರ ನೇತೃತ್ವದಲ್ಲಿ ಆಯೋಜಿಸಲಾಯಿತು.

ಸಭೆಯಲ್ಲಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ತಾಲೂಕು ಘಟಕವನ್ನು ರಚಿಸಲಾಗಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ಹೊರಡಿಸಲಾಯಿತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತಾಲೂಕು ಉಪಾಧ್ಯಕ್ಷರಾಗಿ ಅತೀಫ್ ಅವರನ್ನು ನೇಮಕ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಆರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಮೀರ, ಹಾಗೂ ತಾಲೂಕು ಅಧ್ಯಕ್ಷರಾಗಿ ಮಸ್ತಫ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಸಂಘಟನೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪದಾಧಿಕಾರಿಗಳಿಗೆ ಸಲಹೆ ನೀಡಲಾಯಿತು.

ಸಭೆಯ ಅಂತ್ಯದಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಿತು.

Total Views: 1
Share This Article