ಏಪ್ರಿಲ್ 27 ರಿಂದ ಮೇ 4 ರವರೆಗೆ ಡಿ.ಇಎಲ್.ಇಡಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

DEL ED exam from April 27 to May 4: Prohibitory order imposed




ಏಪ್ರಿಲ್ 27 ರಿಂದ ಮೇ 4 ರವರೆಗೆ ಡಿ.ಇಎಲ್.ಇಡಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಜಾಹೀರಾತು


ಕೊಪ್ಪಳ ಏಪ್ರಿಲ್ 24 (ಕರ್ನಾಟಕ ವಾರ್ತೆ): ಡಿ.ಇಎಲ್.ಇಡಿ ಪರೀಕ್ಷೆಗಳು ಏಪ್ರಿಲ್ 27 ರಿಂದ ಮೇ 4 ರವರೆಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
 ಡಿ.ಇಎಲ್.ಇಡಿ ಪರೀಕ್ಷೆಗಳು ಏಪ್ರಿಲ್ 27 ರಿಂದ ಮೇ 4ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುನಿರಾಬಾದ್ ಗ್ರಾಮದಲ್ಲಿರುವ ಕೊಪ್ಪಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪಿ.ಎಸ್.ಟಿ.ಇ ವಿಭಾಗದಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
 ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Total Views: 0
Share This Article