ಮೂರು ತಿಂಗಳಾದರೂ ಪರಿಹಾರವಿಲ್ಲ: ಕಲುಷಿತ ನೀರಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳು

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

No solution for three months: Children going to school in polluted water




ಮೂರು ತಿಂಗಳಾದರೂ ಪರಿಹಾರವಿಲ್ಲ: ಕಲುಷಿತ ನೀರಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳು

ಜಾಹೀರಾತು

ವಿದ್ಯಾರ್ಥಿಗಳ ಆರೋಗ್ಯಕ್ಕೆ ಭೀತಿ

ಗಂಗಾವತಿ: ಏ.24 ನಗರದ ಇಸ್ಲಾಂಪುರ 16ನೇ ವಾರ್ಡಿನಲ್ಲಿ ನೀರಿನ ಪೈಪ್ ಒಡೆದು ರಸ್ತೆಯ ಮೇಲೆ ನಿರಂತರವಾಗಿ ನೀರು ಹರಿಯುತ್ತಿರುವ ಘಟನೆ ಬಹುಕಾಲದಿಂದ ಮುಂದುವರಿದಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಇಸ್ಲಾಂಪುರ ನಿವಾಸಿಯ ಮಹಿಳೆಯರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು ಮೂರು ತಿಂಗಳಿಂದ ಈ ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕುಡಿಯುವ ನೀರಿನ ಜೊತೆಗೆ ಚರಂಡಿ ನೀರು ಮಿಶ್ರಣವಾಗಿ ಕಲುಷಿತವಾಗಿ ಹರಿಯುತ್ತಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

ಶಾಲೆಯ ಮುಂಭಾಗದಲ್ಲೇ ನೀರು ನಿಂತುಕೊಂಡಿದ್ದು, ಮಹಿಳೆಯರು ಶಾಲೆಯ ಮುಖ್ಯೋಪಾಧ್ಯಾಯರಿಗೂ ತಿಳಿಸಿದ್ದಾರೆ ಏನಾದರೂ ಸಮಸ್ಯೆಗೆ ತಾವೇ ಪರಿಹಾರ ಹುಡುಕಿ ಹರಿಯುವ ನೀರನ್ನು ನಿಲ್ಲಿಸುವ ಪ್ರಯತ್ನ ಮಾಡಿ ಎಂದು ತಿಳಿಸಿದ್ದಾರೆ, ಆದರೂ ಅವರು ಕೂಡ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ, ವಿದ್ಯಾರ್ಥಿಗಳು ಕಲುಷಿತ ನೀರಿನಲ್ಲಿಯೇ ಶಾಲೆಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಮಹಿಳೆಯರು ಮಾಧ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದರಿಂದಾಗಿ ಕೆಲವು ವಿದ್ಯಾರ್ಥಿಗಳ ಕಾಲುಗಳಿಗೆ ಸೋಂಕು ತಗುಲಿ ಬಾವುಗಳು ಕಾಣಿಸಿಕೊಂಡಿರುವ ಮಾಹಿತಿ ತಿಳಿದು ಬಂದಿದೆ

ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಪ್ರಜಾ ಸೇನೆಯ ಜಿಲ್ಲಾಧ್ಯಕ್ಷ ನಬಿ ರಸೂಲ್ ಅವರು, “ಶಾಲಾ ಮಕ್ಕಳ ಆರೋಗ್ಯಕ್ಕೆ ಧಕ್ಕೆಯುಂಟಾದರೆ ಅದರ ಹೊಣೆಗಾರರು ಯಾರು?” ಎಂದು ಪ್ರಶ್ನಿಸಿ, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ತಕ್ಷಣವೇ ಸಮಸ್ಯೆಗೆ ಪರಿಹಾರ ಕಂಡುಹಿಡಿದು, ಚರಂಡಿ ನೀರಿನ ಹರಿವು ನಿಲ್ಲಿಸಿ, ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ,ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಮಹಿಳೆಯರು ಮತ್ತು ಜಿಲ್ಲಾಧ್ಯಕ್ಷ ನಬಿ ರಸೂಲ್ ಒತ್ತಾಯಿಸಿದ್ದಾರೆ.

Total Views: 4
Share This Article