
Dr. Mahantesh calls for concerted efforts in the fight against malaria

ಮಲೇರಿಯಾ ವಿರುದ್ದದ ಹೋರಾಟಕ್ಕೆ ಶ್ರಮಿಸೊಣ ಡಾ.ಮಹಾಂತೇಶ ಕರೆ

ಗಂಗಾವತಿ.25 ನಗರದ 29ನೇ ವಾರ್ಡ ಹಿರೇಜಂತಕಲ್ ನಮ್ಮ ಕ್ಲಿನಿಕ್ ಆಸ್ಪತ್ರೆಯಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಆಚರಣೆ ಮಾಡಲಾಯಿತು
ಹಿರೇಜಂತಕಲ್ ನಮ್ಮ ಕ್ಲಿನಿಕ್ ವೈದ್ಯರಾದ ಡಾ.ಮಹಾಂತೇಶ ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ, ಮುತ್ತ ಕೊಳಚೆ ನೀರು ನಿಂತುಕೊಳ್ಳದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ರಕ್ಷ ಣೆ ಮಾಡಿಕೊಳ್ಳುವುದರಿಂದ ಮಲೇರಿಯಾ ತಡೆಗಟ್ಟಬಹುದು
ನಮ್ಮ ಕ್ಲಿನಿಕ ಆರೋಗ್ಯ ಕೇಂದ್ರದಿಂದ ವಿಶ್ವ ಮಲೇರಿಯಾ ದಿನಾಚರಣ
ಪ್ರಯುಕ್ತ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಂಕ್ರಾಮಿಕ ಕಾಯಿಲೆಗಳಲ್ಲಿ ಮಲೇರಿಯಾ ಒಂದು. ಸಾಂಕ್ರಾಮಿಕ ಕಾಯಿಲೆಗಳು ಸೊಳ್ಳೆಗಳಿಂದ ಹರಡುತ್ತವೆ.ಅನಾಫಿಲಸ್ ಜಾತಿಗೆ ಸೇರಿದ ಹೆಣ್ಣು ಸೊಳ್ಳೆಗಳಿಂದ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಮಲೇರಿಯಾ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸುವ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದರು.
ಹರಿಯದೆ ನಿಂತುಕೊಳ್ಳುವ ಕೊಳಚೆ ನೀರು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಮಲೇರಿಯಾ ಹರಡುವ ಸೊಳ್ಳೆಗಳು ಉತ್ಪಪತ್ತಿಯಾಗುತ್ತವೆ. ಸೊಳ್ಳೆ ಒಬ್ಬನಿಂದ ಮತ್ತೊಬ್ಬನಿಗೆ ಕಡಿಯುವ ಮೂಲಕ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಗೆ ಚಳಿ-ಜ್ವರ ಬರುವ ಲಕ್ಷ ಣ ಕಾಣಿಸಿಕೊಳ್ಳುತ್ತದೆ. ಕೂಡಲೇ ಹತ್ತಿರದಲ್ಲಿರುವ ಆಸ್ಪತ್ರೆಗೆ ಹೋಗಿ ವೈದ್ಯರಿಂದ ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವುದರ ಜತೆಯಲ್ಲಿ ಅವರ ಸೂಚನೆಯಂತೆ ಚಿಕಿತ್ಸೆ ಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.
ಮಲೇರಿಯಾ ಲಿಂಕ್ ವರ್ಕ್ ರ ಹೆಚ್.ಸುರೇಶ ಮಾತನಾಡಿ, ಮಲೇರಿಯಾ ತಡೆಗಟ್ಟುವ ಉದ್ದೇಶದಿಂದ 2007ರಿಂದ ವಿಶ್ವ ಮಲೇರಿಯಾ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ. ಜನರಿಗೆ ಮಲೇರಿಯಾ ಹರಡುವಿಕೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದೀಗ ಮಲೇರಿಯಾ ಹರಡುವ ಸೊಳ್ಳೆಗಳನ್ನು ನಿಯಂತ್ರಿಸಲು ವಿಶೇಷ ಜಾತಿಯ ಚಿಕ್ಕ ಗಾತ್ರದ ಮೀನುಗಳನ್ನು ಸಾಕಲಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ
ಸಂತೋನ್ಪತ್ತಿಯಾಗಿ ಕೆರೆ ನೀರಿನೊಳಗೆ ಉತ್ಪತ್ತಿಯಾಗುವ ಸೊಳ್ಳೆ ಮರಿಗಳನ್ನು ತಿನ್ನುತ್ತವೆ. ಈ ಮಾರ್ಗೋಪಾಯದಿಂದ
ಮಲೇರಿಯಾ ಬಾರದಂತೆ ನಿಯಂತ್ರಣ ಮಾಡಲಾಗುತ್ತಿದೆ ಮಲೇರಿಯಾ ರೋಗಕ್ಕ ಚಿಕಿತ್ಸೆ ಈ ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇದ್ದು ರಕ್ತಲೇಪನ ಪರೀಕ್ಷೆಯಿಂದ ಮಲೇರಿಯಾ ರೋಗವೆಂದು ಧೃಡಪಟ್ಟರೆ ರೋಗದ ಪ್ರಭೇದ ವಿಧಕ್ಕನುಗುಣವಾಗಿ ತೀವ್ರ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ.ಆರೋಗ್ಯ ನೀರಿಕ್ಷಣಾಧಿಕಾರಿ ಸವಿತಾ,ಶಿಲ್ಪ,ಆರೋಗ್ಯ ಸಿಬ್ಬಂದಿಗಳಾದ ಹನುಮಂತಿ,ರಾಜಸಾಬ,ಆಶಾ ಕಾರ್ಯಕರ್ತೆ ವಿಜಯಲಕ್ಷ್ಮಿ ಆಚಾರ್ಯ, ಗೌಸೀಯಾಬೇಗಂ,ಮೀನಾಕ್ಷಿ, ಗೌರಮ್ಮ,ರಂಗಮ್ಮ,ಮಹಾದೇವಮ್ಮ ಸೇರಿದಂತೆ ಇತರರು
