ನಟ ಚೇತನ್ ಅವರ ವಿವಾದಾತ್ಮಕ ಹೇಳಿಕೆ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆಕ್ರೋಶ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Actor Chetan's controversial statement angers District President Khader Bhasha




ನಟ ಚೇತನ್ ಅವರ ವಿವಾದಾತ್ಮಕ ಹೇಳಿಕೆ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆಕ್ರೋಶ

ಜಾಹೀರಾತು

ಗಂಗಾವತಿ: ನಟ ಚೇತನ್ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕನ್ನಡದ ಅಪ್ರತಿಮ ನಟರಾದ ಡಾ.ರಾಜ್ ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ಖಂಡಿಸಿ ಡಾll ರಾಜಕುಮಾರ್ ಸಂಘದ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧವ ಡಾll ರಾಜಕುಮಾರ್ ಸಂಘದ ಜಿಲ್ಲಾಧ್ಯಕ್ಷರಾದ ಖಾದ‌ರ್ ಭಾಷಾ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನಟ ಚೇತನ್ ಅವರ ಹೇಳಿಕೆಗಳು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂದು ಹೇಳಿದರು. ಡಾ. ರಾಜ್ ಕುಮಾ‌ರ್ ಅವರು ಕೇವಲ ನಟರಷ್ಟೇ ಅಲ್ಲ, ಕನ್ನಡ ಸಂಸ್ಕೃತಿ ಮತ್ತು ನಾಡಿನ ಗೌರವದ ಪ್ರತೀಕವಾಗಿದ್ದು, ಅವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುವುದು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, ತಕ್ಷಣವೇ ನಟ ಚೇತನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ರೀತಿಯ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕನ್ನಡದ ಹೆಮ್ಮೆ ಡಾ.ರಾಜ್ ಕುಮಾ‌ರ್ ಅವರ ಗೌರವ ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ಹೇಳಿದರು. ನಗರದಲ್ಲಿ ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟಗಳು ನಡೆಯುವ ಸಾಧ್ಯತೆ ಇದೆ ಎಂದು ಜಿಲ್ಲಾಧ್ಯಕ್ಷ ಖಾದರ್ ಭಾಷಾ ಮತ್ತು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

Total Views: 1
Share This Article