ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Kuvempu University announces PhD degree for IGP Harsha P.S.




ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ

ಜಾಹೀರಾತು

ಕೊಪ್ಪಳ ಏಪ್ರಿಲ್ 27 (ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದ್ದು, ಮೇ. 6 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ.
ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಪ್ರಬಂಧವು ಈ ಸಂರಕ್ಷಿತ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕ್ಯಾಮೆರಾ ಟ್ರಾö್ಯಪಿಂಗ್ ಮತ್ತು ವಿವರವಾದ ಸಂಘರ್ಷ ತಾಣಗಳ ವಿಶ್ಲೇಷಣೆ ಸೇರಿದಂತೆ ತೀವ್ರವಾದ ಕ್ಷೇತ್ರಕಾರ್ಯವನ್ನು ಆಧರಿಸಿದೆ.
ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Total Views: 0
Share This Article