ಏ.30 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ 

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

State Government Employees' Day and District Level Best Service Award Ceremony on April 30




ಏ.30 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ 

ಜಾಹೀರಾತು


ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): ‎ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏಪ್ರಿಲ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಆಯೋಜಿಸಲಾಗಿದೆ.
‎ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.  ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನ್‌ಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‌ರಾಜ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಆಗಮಿಸುವರು.
‎ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ ಆರ್. ಜುಮ್ಮನ್ನವರ್ ಹಾಗೂ ಕೊಪ್ಪಳ ಜಿಲ್ಲೆಯ ಸಮಸ್ತ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.    

Total Views: 0
Share This Article