ಕೊಪ್ಪಳ: ಫಸಲ್ ಭೀಮಾ ಯೋಜನೆಯ ತಿರಸ್ಕೃತ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Koppal: Opportunity to file objections to rejected proposal for Fasal Bima Yojana




ಕೊಪ್ಪಳ: ಫಸಲ್ ಭೀಮಾ ಯೋಜನೆಯ ತಿರಸ್ಕೃತ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಜಾಹೀರಾತು

ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಫಸಲ್ ಭೀಮಾ(ವಿಮಾ) ಯೋಜನೆಯಡಿಯಲ್ಲಿ ಬೆಳೆ ಸಮೀಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
‎ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ 2024-25ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹೊಂದಾಣಿಕೆಯಾಗದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರು ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಪ್ರಸ್ತುತ ಸಂರಕ್ಷಣೆ ತಂತ್ರಾAಶದನ್ವಯ ಕೊಪ್ಪಳ ತಾಲೂಕಿಗೆ ಸಂಬAಧಿಸಿದAತೆ ಮುಂಗಾರು 1,630, ಹಿಂಗಾರು 754 ಹಾಗೂ ಬೇಸಿಗೆಯ 8 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಸಂಬAಧಪಟ್ಟ ರೈತರ ಆಕ್ಷೇಪಣೆ ಇದ್ದಲ್ಲಿ ಮಾತ್ರ ಮರುಪರಿಶೀಲಿಸಲು, ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳೊಂದಿಗೆ ಮೇ 12 ರೊಳಗಾಗಿ ಕೊಪ್ಪಳದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮನವಿಯನ್ನು ಸಲ್ಲಿಸಬೇಕು.
ಮನವಿ ಸಲ್ಲಿಸಲು 2024-25ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ, ಅದರ ರಶೀದಿ ಮತ್ತು ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ ರಶೀದಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article