
District in-charge minister instructs to respond to drinking water problem

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆಯನ್ನು ಜರುಗಿಸಿ, ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯತಿಗಳಿದ್ದು, 722 ಗ್ರಾಮಗಳಿರುತ್ತವೆ. ಈ ಗ್ರಾಮಗಳಲ್ಲಿ 418 ಗ್ರಾಮಗಳಿಗೆ DBOT, MVS ಯೋಜನೆ ಮುಖಾಂತರ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 2,337 ಸರ್ಕಾರಿ ಮತ್ತು 5,551 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 720 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿರುತ್ತದೆ. 30 ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು, ಅಲ್ಲಿ 39 ಖಾಸಗಿ ಬೋರ್‌ವೆಲ್‌ಗಳ ಮಾಲೀಕರಿಂದ ಕರಾರು ಪತ್ರವನ್ನು ಮಾಡಿಸಿಕೊಂಡು ಕುಡಿಯುವ ನೀರು ಪೂರೈಸಲಾಗುತ್ತಿದೆ.
ಜಿಲ್ಲೆಯ ನಗರ ಪ್ರದೇಶದಲ್ಲಿ ಜೂನ್ ಮಾಹೆಯವರೆಗೆ ಕುಡಿಯುವ ನೀರಿನ ಸಮಸ್ಯೆ ಇರುವದಿಲ್ಲ ಮತ್ತು ನಗರ ಪ್ರದೇಶ Surface Water ಮತ್ತು ಬೋರ್‌ವೆಲ್ ನಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ಒಟ್ಟು 845 ಬೋರ್‌ವೆಲ್‌ಗಳು ಇದ್ದು, ಅದರಲ್ಲಿ 762 ಬೋರ್‌ವೆಲ್‌ಗಳು ಚಾಲನೆಯಲ್ಲಿರುತ್ತವೆ.
ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ಪರೀಕ್ಷೆಗೊಳಪಡಿಸಿ ಶುದ್ದತೆಯನ್ನು ಖಚಿತಪಡಿಸಿಕೊಂಡು ಅಗತ್ಯ ಕ್ರಮವಹಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ. ಮುಂದುವರೆದು OHT, Mini Water Tank, Cistern GLSR ಸಂಪು, ಹಾಗೂ ನೀರು ಸಂಗ್ರಾಹಕಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುದ್ಧೀಕರಿಸಲು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಚರಂಡಿ ಪಕ್ಕದಲ್ಲಿರುವ ಪೈಪ್‌ಲೈನ್‌ಗಳನ್ನು ಸ್ಥಳಾಂತರಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ದೂರನ್ನು ಸಲ್ಲಿಸಲು ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿರುತ್ತದೆ. ಇದುವರೆಗೂ ಗ್ರಾಮೀಣ ಪ್ರದೇಶದಲ್ಲಿ 71 ಮತ್ತು ನಗರ ಪ್ರದೇಶದಲ್ಲಿ 121 ದೂರುಗಳು ಸ್ವೀಕೃತವಾಗಿದ್ದು, ಆ ದೂರುಗಳನ್ನು ಬಗೆಹರಿಸಲಾಗಿದೆ. ಆ ದೂರುಗಳು ಪೈಪ್‌ಲೈನ್ ದುರಸ್ಥಿ, ಕುಡಿಯುವ ನೀರು ಒದಗಿಸಲು ಮತ್ತು ಮೋಟರ್ ದುರಸ್ಥಿಗೆ ಸಂಬAಧಿಸಿರುತ್ತವೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಉದ್ಭವಿಸಿದರೆ ತಕ್ಷಣ ಸ್ಪಂದಿಸಲು ತಹಶೀಲ್ದಾರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ್ ಇವರಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮಮಟ್ಟದ ಮತ್ತು ತಾಲೂಕು ಮಟ್ಟದ ಟಾಸ್ಕ್ಫೋರ್ಸ್ನಲ್ಲಿ ಸಮಿತಿಯನ್ನು ರಚನೆ ಮಾಡಿಕೊಳ್ಳಲಾಗಿದೆ ಹಾಗೂ ಸದ್ಯಕ್ಕೆ ಜಿಲ್ಲೆಯಲ್ಲಿ ಅನುದಾನದ ಕೊರತೆ ಇರುವುದಿಲ್ಲ.
ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕಾ ಮಟ್ಟದ ಕಾರ್ಯಪಡೆ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿ ಶುಕ್ರವಾರ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಪಶು ಸಖಿ, ಕೃಷಿ ಸಖಿ ಅಧಿಕಾರಿಗಳೊಂದಿಗೆ ಸಾಪ್ತಾಹಿಕ ಸಭೆಗಳನ್ನು ನಡೆಸಲು ನಿರ್ದೇಶನ ನೀಡಲಾಗಿದೆ ಮತ್ತು ಸಭೆಯ ನಡಾವಳಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ.
ಸಭೆಯಲ್ಲಿ ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಯಿತು. ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ, ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಕೊಪ್ಪಳ, ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಉಪವಿಭಾಗಾಧಿಕಾರಿಗಳು, ಕೊಪ್ಪಳ, ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ನಿರ್ದೇಶಕರು ಸಾಮಾಜ ಕಲ್ಯಾಣಾಧಿಕಾರಿಗಳು ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಜಂಟಿ ಕೃಷಿ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ಕೆಳಕಂಡ ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿರುತ್ತದೆ. ಇದುವರೆಗೂ 192 ದೂರುಗಳು ಸ್ವೀಕೃತವಾಗಿದ್ದು, ಅದರಲ್ಲಿ 192 ದೂರುಗಳನ್ನು ಬಗೆಹರಿಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎಲ್ಲ ಸಂಬAಧಿತ ಕಚೇರಿಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳ: 08539-221077, ಜಿಲ್ಲಾ ಪಂಚಾಯತ್, ಕೊಪ್ಪಳ: 08539-22107 & 7829658536, ತಾಲೂಕು ಪಂಚಾಯತ್, ಕೊಪ್ಪಳ: 9620410509, ತಾಲೂಕು ಪಂಚಾಯತ್‌ಗಳಾದ ಯಲಬುರ್ಗಾ: 9620414476, ಕುಷ್ಟಗಿ: 7899986581, ಕನಕಗಿರಿ: 80730511234, 90362205541, ಕುಕನೂರು: 8296920386, ಗಂಗಾವತಿ: 6361940327, 9036892963, ಕಾರಟಗಿ: 9845213245 ಸಂಖ್ಯೆಗಳಿಗೆ ಸಾರ್ವಜನಿಕರು ಕುಡಿಯುವ ನೀರಿಗೆ ಸಂಬAಧಿಸಿದ ಯಾವುದೇ ದೂರುಗಳನ್ನು ಸಂಬAಧಿಸಿದ ಸಹಾಯವಾಣಿಗೆ ಕರೆ ಮಾಡಿ ಸಲ್ಲಿಸಬಹುದು.
ಸ್ಥಳೀಯ ಸಂಸ್ಥೆಗಳಾದ ಕೊಪ್ಪಳ: 08539-230192, ಭಾಗನ್ಯಗರ: 9964662243, ಕುಕನೂರು: 8197396725, ಯಲಬುರ್ಗಾ: 8951282525, 9980454930, ಕುಷ್ಟಗಿ: 08536-267041 & 9742712646, ತಾವರಗೇರಾ: 9900572120, ಕಾರಟಗಿ: 9900972859 & 9449963320, ಕನಕಗಿರಿ: 8951133577, ಗಂಗಾವತಿ: 8050428081, ಹನುಮಸಾಗರ: 9980014431 ಸಂಖ್ಯೆಗಳಿಗೆ ಸಾರ್ವಜನಿಕರು ಕುಡಿಯುವ ನೀರಿಗೆ ಸಂಬAಧಿಸಿದ ಯಾವುದೇ ದೂರುಗಳನ್ನು ಸಂಬAಧಿಸಿದ ಸಹಾಯವಾಣಿಗೆ ಕರೆ ಮಾಡಿ ಸಲ್ಲಿಸಬಹುದು.
ಜಿಲ್ಲೆಯಲ್ಲಿ 885811 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇನ್ನೂ 58 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
