
Foundation stone laying of district level satellite bus stand on May 2nd - site inspection.

ಮೇ 2 ರಂದು ಜಿಲ್ಲಾ ಮಟ್ಟದ ಸ್ಯಾಟಲೈಟ್ ಬಸ್ ನಿಲ್ದಾಣದ ಶಂಕುಸ್ಥಾಪನೆ – ಸ್ಥಳ ಪರಿಶೀಲನೆ.

ಗಂಗಾವತಿ: ನಗರದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಜಿಲ್ಲಾ ಮಟ್ಟದ ಕೆ.ಎಸ್.ಆರ್.ಟಿ.ಸಿ (KSRTC) ಸ್ಯಾಟಲೈಟ್ ಬಸ್ ನಿಲ್ದಾಣದ ಶಂಕುಸ್ಥಾಪನಾ ಕಾರ್ಯಕ್ರಮವು ಮೇ 2 ರಂದು ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಪೂರ್ವಭಾವಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣ ನಿರ್ಮಾಣವಾಗಲಿರುವ ಜಾಗವನ್ನು ವೀಕ್ಷಿಸಿದ ಗಂಗಾವತಿ ಶಾಸಕ ರು ಕಾಮಗಾರಿಯ ನೀಲನಕ್ಷೆ ಹಾಗೂ ಯೋಜನೆಯ ಅನುಷ್ಠಾನದ ಕುರಿತು ಗುತ್ತಿಗೆದಾರರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕರದ ಗಾಲಿ ಜನಾರ್ದನ್ ರೆಡ್ಡಿ ಅವರು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ನೂತನ ಸ್ಯಾಟಲೈಟ್ ಬಸ್ ನಿಲ್ದಾಣವು ಗಂಗಾವತಿ ನಗರದ ಸಾರಿಗೆ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದ್ದು, ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಸ್ಥಳ ಪರಿಶೀಲನೆಯ ವೇಳೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
